3:09 AM Saturday28 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕಕ್ಕೆ ಜುಲೈ 21ರಂದು ಚುನಾವಣೆ

25/06/2024, 16:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಖಿಲ ಭಾರತ ವೀರಶೈವ ಮಹಾಸಭಾದ ಆದೇಶದ ಮೇರೆಗೆ ಜುಲೈ 21ರಂದು ನಂಜನಗೂಡು ತಾಲೂಕು ವೀರಶೈವ ಮಹಾಸಭಾ ಘಟಕದ ಚುನಾವಣೆ ನಡೆಸಲಾಗುತ್ತಿದೆ ಎಂದು ತಾಲೂಕು ಸಹಾಯಕ ಚುನಾವಣಾ ಅಧಿಕಾರಿ ಶಿವಲಿಂಗಪ್ಪ ತಿಳಿಸಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಅಧ್ಯಕ್ಷ ಸ್ಥಾನ ಸೇರಿ 13 ಸಾಮಾನ್ಯ ಹಾಗೂ 7 ಮಹಿಳಾ ಸದಸ್ಯತ್ವ ಸ್ಥಾನ ಸೇರಿ ಒಟ್ಟು 21 ಸದಸ್ಯತ್ವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜೂನ್ 27ರಿಂದ ಜುಲೈ 4ರ ವರೆಗೆ ನಾಮಪತ್ರ ಸಲ್ಲಿಸುವುದು ಜುಲೈ ಎಂಟಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ಅಗತ್ಯ ಬಿದ್ದಲ್ಲಿ ಜುಲೈ 21ರಂದು ಭಾನುವಾರ ಬೆಳಿಗ್ಗೆ ಎಂಟರಿಂದ ಸಂಜೆ 5:00 ವರೆಗೆ ಪಟ್ಟಣದ ಶ್ರೀ ಮಲ್ಲನ ಮೂಲೆ ಮಠದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ನಂತರ ಅಂದೆ ಫಲಿತಾಂಶ ಪ್ರಕಟಿಸಲಾಗುವುದು.
ಜೂನ್ 27ರಿಂದ ಜುಲೈ 4ರ ವರೆಗೆ ಪಟ್ಟಣದ ಕಬ್ಬಳ್ಳಿ ಹಾಸ್ಟೆಲ್ ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಚುನಾವಣಾ ಅಧಿಕಾರಿಗಳಾದ ಬಸವರಾಜ್, ಮಾದಪ್ಪ, ತಾಲೂಕು ಮಹಾಸಭಾ ಅಧ್ಯಕ್ಷ ಬುಲೆಟ್ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಶಿವಬಸಪ್ಪ ಖಜಾಂಚಿ ಮಾಧು, ಮುಳ್ಳೂರು ಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು