ಇತ್ತೀಚಿನ ಸುದ್ದಿ
ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ
26/06/2024, 19:39
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ- ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಾಗೆ ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.