12:58 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ನಾರಾಯಣಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಧರಣಿ; ಸಿಇಗೆ ಮನವಿ

26/06/2024, 23:31

ಶಿವು ರಾಠೋಡ ನಾರಾಯಣಪುರ ಯಾದಗಿರಿ

info.reporterkarnataka@gmaik.com

ನಾರಾಯಣಪುರ ಕೆಬಿಜೆಎನ್‌ಎಲ್ ಮುಖ್ಯ ಇಂಜನೀಯರ ವಲಯ ಕಚೇರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ, ವಿವಿಧ ಬೇಡಿಕೆಗಳು ಈಡೇರಿಸುವಂತೆ ಸಿಇ ಆರ್.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಸಂಘದ ಸುರಪುರ ಘಟಕ ಅಧ್ಯಕ್ಷ ಹಣಮಂತರಾಯ ಚಂದ್ಲಾಪುರ ಮಾತನಾಡಿ, ಕಳೆದ ವರ್ಷ ಬರಗಾಲ ಹಿನ್ನೆಲೆ ರೈತರೂ ಸಂಕಷ್ಟ ಅನುಭವಿಸಿ ಬೆಳೆ ಬೆಳೆದಿಲ್ಲಾ, ಸದ್ಯ ಮುಂಗಾರು ಮಳೆ ಉತ್ತಮವಾಗಿ ಸುರಿದಿದೆೆ. ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಉಪ-ಕಾಲುವೆಗಳು, ವಿತರಣಾ ಕಾಲುವೆಗಳಲ್ಲಿ ಮಣ್ಣಿನ ಹೂಳು, ಕಸದ ತ್ಯಾಜ್ಯದ ರಾಶಿ ಇದ್ದು ಕೂಡಲೇ ಅವುಗಳನ್ನು ತೆರವುಗೊಳಿಸುವ ಕ್ಲೋಸರ್ ಕಾಮಗಾರಿಗಳನ್ನು ಕೂಡಲೇ ಕೈಗೆತ್ತುಕೊಳ್ಳಬೇಕು. ಆಗ ಮಾತ್ರ ಕಾಲುವೆಯ ಕೊನೆ ಭಾಗದ ರೈತರ ಜಮೀನಿಗೆ ನೀರು ತಲುಪಲಿದೆ ಎಂದು ಹೇಳಿದರು.


ಇನ್ನೋರ್ವ ರೈತ ಸಂಘದ ಹುಣಸಗಿ ಘಟಕ ಅಧ್ಯಕ್ಷ ಹನುಮಗೌಡ ಪೊಲಿಸ್‌ ಪಾಟೀಲ್ ಮಾತನಾಡಿ, ನೀರಾವರಿ ಯೋಜನೆಗೆ ಅಗತ್ಯವಿರುವಷ್ಟು ವರ್ಕ ಇನ್‌ಸ್ಪೆಕ್ಟರ ನೇಮಕ ಮಾಡಬೇಕು, ಜಂಗಿನಗಡ್ಡಿ, ಮೇಲಿನಗಡ್ಡಿ, ರೈತರ ಜಮೀನುಗಳಿಗೆ ಹೊಸ ಕಾಲುವೆಯ ನಿರ್ಮಿಸುವ ಮೂಲಕ ನೀರು ಹರಿಸಲು ಕ್ರಮವಹಿಸಬೇಕು, ಬೋನಾಳ ಏತ ನೀರಾವರಿ ಯೋಜನೆಯ ಎಲ್ಲಾ ನ್ಯೂನೆತೆಗಳನ್ನು ಸರಿ ಪಡಿಸಿ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರೊದಿಗಿಸಬೇಕು, ಬೋನಾಳ ಏತ ನೀರಾವರಿ ಕಚೇರಿ ಸುರಪುರಕ್ಕೆ ವರ್ಗಾಯಿಸಬೇಕು, ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅನುಭವವಿರುವ ರೈತ ಪ್ರತಿನಿಧಿಯನ್ನು ಆವ್ಹಾನಿಸಬೇಕು ಎಂದು ಒತ್ತಾಯಿಸಿದ ಅವರು ರೈತರ ಬೇಡಿಕೆಗಳು ಈಡೇರದೆ ಇದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವದಾಗಿ ಹೇಳಿದರು.
ಮನವಿ ಸ್ವೀಕರಿಸಿದ ಸಿಇ ಆರ್.ಮಂಜುನಾಥ ಮನವಿಯಲ್ಲಿನ ಬೇಡಿಕೆಗಳ ಕುರಿತು ಮೇಲಾಧಿಕಾರಿಗಳಿಗೆ, ಸರ್ಕಾರದ ಗಮನಕ್ಕೆ ತರಲಾಗುವದು ಎಂದು ಭರವಸೆ ನೀಡಿದರು.
ಪ್ರತಿಭಟನೆಗೂ ಮುನ್ನ ಇಲ್ಲಿನ ಮಹರ್ಷಿ ವಾಲ್ಮೀಕಿ ವೃತ್ತದಿಂದ ರೈತ ಸಂಘದವರು ಸಿಇ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಅಧೀಕ್ಷಕ ಅಭಿಯಂತರ ರಮೇಶ ಪವಾರ್, ರೈತ ಸಂಘದ ಮುಖಂಡರುಗಳಾದ ಸಾಹೇಬಗೌಡ ಮದಲಿಂಗನಾಳ, ಗದ್ದೆಪ್ಪ ನಾಗಬೇನಾಳ, ತಿಪ್ಪಣ್ಣ ಜಂಪಾ, ನಿಂಗನಗೌಡ ಗುಳಬಾಳ, ಅವಿನಾಶ ನಾಯಕ, ಮಲ್ಲಣ್ಣ, ನಾಗನಗೌಡ, ಮಹಬೂಬ ಅಂಗಡಿ, ಸಿದ್ದಪ್ಪ ಕ್ಯಾದಗಿ, ಬಾಗಪ್ಪ, ಅಮರೇಶ ಕಾಮನಕೇರಿ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು, ಕೆಬಿಜೆಎನ್‌ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಸ್ಥಳೀಯ ಪೊಲೀಸ್ ಠಾಣೆ ಪಿಎಸೈ ಇಂದುಮತಿ ಪಾಟೀಲ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು