ಇತ್ತೀಚಿನ ಸುದ್ದಿ
ರಾಯಚೂರು: ಹೃದಯಾಘಾತದಿಂದ ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; 6 ಮಂದಿ ವಿರುದ್ಧ ಪ್ರಕರಣ ದಾಖಲು
28/06/2024, 18:47
ಶಿವು ರಾಠೋಡ ರಾಯಚೂರು
info.reporterkarnataka@gmail.com
ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರೋಗಿ ಮೊಹಮದ್ ಹಮೀದ್ ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಸಿಲಾಗಿತ್ತು. ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ನೀಡಲು ಆರಂಭಿಸಿದ್ದಾರೆ. ಆದರೆ, ಹಮೀದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದು, ಹಮೀದ್ ಕುಟುಂಬಸ್ಥರು ಆಸ್ಪತ್ರೆಯಲ್ಲಿ ಗಲಾಟೆ ಮಾಡಿ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಖುರ್ಚಿ, ಮೇಜುಗಳನ್ನು ಮುರಿದು ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ರಾಯಚೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಮೀದ್ ಅವರ ಸಂಬಂಧಿಗಳಾದ 6 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.