3:38 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್ ಶೆಟ್ಟಿ

28/06/2024, 22:12

ಮಂಗಳೂರು(reporterkarnataka.com): ನಗರದೊಳಗೆ ಅನಧಿಕೃತವಾಗಿ ತಲೆ ಎತ್ತಿರುವ ಗೂಡಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಲಫೋನ್ ಇನ್ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಚಾರಿಗಳಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಫೂಟ್‌ಪಾತ್‌ಗಳನ್ನು ನಿರ್ಮಿಸಲಾಗಿದೆ.
ಆ ಸ್ಥಳಗಳಲ್ಲಿ ಗೂಡಂಗಡಿಗಳನ್ನು ನಿರ್ಮಿಸಿರುವುದರಿಂದ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಇದನ್ನು ಶೀಘ್ರವಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ಆದೇಶ ನೀಡಲಾಗುವುದು ಎಂದರು.
ಫೋನ್ ಇನ್ ವೇಳೆ ರಸ್ತೆ ಬದಿಗಳಲ್ಲಿನ ಅನಧಿಕೃತ ಗೂಡಂಗಡಿಗಳ ಬಗ್ಗೆ ಹಲವು ದೂರುಗಳು ಸಾರ್ವಜನಿಕರಿಂದ ವ್ಯಕ್ತವಾಗಿದೆ. ನಗರದ ಹಲವೆಡೆ ಫಾಸ್ಟ್ ಫುಡ್‌ಗಳಲ್ಲಿ ಬಳಸುವ ಖಾದ್ಯ ತೈಲ, ನೀರು ಸರಿ ಇಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಅಧಿಕಾರಿಗಳ ಮೂಲಕ ದಾಳಿ ನಡೆಸಿ ತೆರವಿಗೆ ಕ್ರಮ ವಹಿಸಲಾಗುವುದು. ಪ್ರತಿ ವಾರ್ಡ್ನಲ್ಲಿರುವ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ವಾರ್ಡ್‌ಗಳಲ್ಲಿ ಲಭ್ಯ ಇರುವ ಸರಕಾರಿ ಜಾಗದಲ್ಲಿ ವೆಂಡಿಂಗ್ ಝೋನ್ (ವ್ಯಾಪಾರ ವಲಯ)ಗಳನು ಗುರುತಿಸಿ ಅಲ್ಲಿಗೆ ವ್ಯಾಪಾರ ಸ್ಥಳಾಂತರಿಸಲು ಕ್ರಮ ವಹಿಸಲಾಗುವುದು. ಸ್ಥಳಾಂತರ ಆಗದವರ ವಿರುದ್ಧ ಕಾನೂನು ಕ್ರಮ ವಹಿಸುವುದಾಗಿ ಮೇಯರ್ ಹೇಳಿದರು.
ನಗರದಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್‌ಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಧಾರ್ಮಿಕ ವಿಚಾರಕ್ಕೆ ಹಾಗೂ ರಾಜಕೀಯ ನಾಯಕರುಗಳ ವಿಚಾರದಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್‌ಗಳನ್ನು ಉಪಯೋಗಿಸುತ್ತಿದ್ದಾರೆ.
ಅದರ ಬದಲಿಗೆ ಹೋಲ್ಡಿಂಗ್ಸ್‌ಗಳನ್ನು ಬಳಸುವಂತೆ ಮನವಿ ಮಾಡಿಕೊಂಡರು.
ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಪಿಪಿಪಿ ಮಾದರಿಯಲ್ಲಿ ಪೇ ಪಾರ್ಕಿಂಗ್ ನಿರ್ಮಾಣ ಮಾಡಲಾಗುತ್ತಿದೆ. ಗುತ್ತಿಗೆದಾರರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಾನವೀಯತೆ ದೃಷ್ಟಿಯಿಂದ ಕಾಮಗಾರಿಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಗುಣಮುಖರಾದಮೇಲೆ ಮುಂದುವರಿಸಲಾಗುವುದು. ಅವರಿಂದ ಆಗದಿದ್ದರೆ ಅದನ್ನು ಟರ್ಮಿನೇಟ್ ಮಾಡಿ ಹೊಸ ಟೆಂಡರ್ ಕರೆಯಲಾಗುವುದು ಎಂದರು.
ಈ ವರ್ಷದಿಂದ ನಾರಾಯಣ ಗುರು ಜಯಂತಿ ಆಚರಣೆಗೆ ಮನಪಾ ವ್ಯಾಪ್ತಿಯಲ್ಲಿ ಬರುವ ರಿಜಿಸ್ಟರ್ ಆಗಿರುವ ನಾರಾಯಣಗುರು ಮಂದಿರಗಳು ನಾರಾಯಣಗುರು ಜಯಂತಿ ಆಚರಿಸಿ, ಅದರ ಖರ್ಚಿನ ದಾಖಲೆಯನ್ನು ಮನಪಾಗೆ ಸಲ್ಲಿಸಿದಲ್ಲಿ ಅಂತವರಿಗೆ 15 ಸಾವಿರ ರೂ. ನೀಡಲಾಗುವುದು ಎಂದು ತಿಳಿಸಿದರು.
ಮನಪಾ ವ್ಯಾಪ್ತಿಗೆ ಒಳಪಟ್ಟ ಸರಕಾರಿ ಕನ್ನಡ ಮಾಧ್ಯಮ ಮತ್ತು ಅನುದಾನಿಕ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಶೇ. 90 ಅಥವಾ ಅದಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ತೆರಿಗೆ ಅಫಿಲು ಸ್ಥಾಯಿ ಸಮಿತಿಗೆ ಅಥವಾ ಮೇಯರ್ ಅವರಿಗೆ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬುಹುದು ಎಂದು ಅವರು ಹೇಳಿದರು.
ಸ್ಥಾಯಿ ಸಮಿತಿ ಅಧ್ಯಕ್ಷರಾದ ವರುಣ್ ಚೌಟ, ಲೋಹಿತ್ ಅಮೀನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು