5:24 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ ಪತ್ತೆ!: ಅಧಿಕಾರಿಗಳೇ ಏನು ಮಾಡುತ್ತಿದ್ದೀರಿ?

29/06/2024, 19:35

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಶಹಪುರ್ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಊಟದಲ್ಲಿ ಹುಳುಗಳು ಕಂಡು ಬಂದಿದ್ದು, ವಿದ್ಯಾರ್ಥಿಗಳು ದಂಗಾಗಿದ್ದಾರೆ.


ಬಾಳು ಬೆಳಗಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂಥ ಕಳಪೆ ಗುಣಮಟ್ಟದ ಆಹಾರವನ್ನು ನೀಡಿ ಇಲಾಖೆಯ ಅಧಿಕಾರಿಗಳು ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಇಂಥ ಭ್ರಷ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿ ಗಳ ಭವಿಷ್ಯ ಉಜ್ವಲವಾಗಲಿ ಎಂದು ಇಲಾಖೆ ಸಾವಿರಾರು ಕೋಟಿ ಖರ್ಚು ಮಾಡುತ್ತದೆ. ಆದರೆ ಶಹಪುರದಲ್ಲಿ ಅಧಿಕಾರಿಗಳು ತಮ್ಮ ಹೊಟ್ಟೆ ತುಂಬಿಸಿಕೊಳ್ಳುವುದು ಗೋಸ್ಕರ ಮಕ್ಕಳನ್ನು ಬಲಿ ಕೊಡುತ್ತಿದ್ದಾರೆ. ಇಂತಹ ಕಳಪೆ ಮಟ್ಟದ ಆಹಾರ ಕೊಡುವ ಏಜೆನ್ಸಿಗಳು ಹಾಗೂ ತೆಗೆದುಕೊಳ್ಳುತ್ತಿರುವ ಮೇಲ್ವಿಚಾರಕರು ಕೂಡಲೇ ಅಮಾನತು ಮಾಡುವಂತೆ ಪ್ರದೀಪ್ ಅಣಬಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು