ಇತ್ತೀಚಿನ ಸುದ್ದಿ
ನೂತನ ಸಂಸದ, ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಭೇಟಿಯಾದ ಮಾಜಿ ಸಚಿವ ರೈ: ಅಭಿನಂದನೆ ಸಲ್ಲಿಕೆ
29/06/2024, 19:58
ನವದೆಹಲಿ(reporterkarnataka.com): ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದರಾಗಿ ಆಯ್ಕೆಯಾದ ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಶನಿವಾರ ದೆಹಲಿಯ ತಮಿಳುನಾಡು ಭವನದಲ್ಲಿ ಭೇಟಿಯಾದ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಪಿಯೂಸ್ ರೋಡ್ರಿಗಸ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್
ಎಸ್. ಉಪಸ್ಥಿತರಿದ್ದರು.