ಇತ್ತೀಚಿನ ಸುದ್ದಿ
ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ ಮಾರ್ಗ ರಚನೆಗೆ ಅನುದಾನದ ಬೇಡಿಕೆ
29/06/2024, 22:23
ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ಕಲ್ಯಾಣ ಕರ್ನಾಟಕ 7 ಜಿಲ್ಲೆಗಳ ಅಭಿವೃದ್ಧಿ ಅನುದಾನ, ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ, ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಗೆ 3200 ಕೋಟಿ ರೂ.ಗಳ ಯೋಜನೆಗೆ ಕೇಂದ್ರದ ನೆರವು, ಬೆಂಗಳೂರು ನಗರ ಸಂಚಾರ ದಟ್ಟಣೆ ಕಡಿಮೆ ಮಾಡಲು 3000 ಕೋಟಿ ರೂ.ಗಳ 60 ಕಿಮೀ. ಸುರಂಗ ಮಾರ್ಗ ರಚನೆಗೆ ಕೇಂದ್ರದ ಅನುದಾನ ಕಲ್ಪಿಸುವಂತೆ ಮನವಿ ಮಾಡಿದರು.