5:14 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ: ಎಸ್ ಐಓ ವತಿಯಿಂದ ಬಿ.ಸಿ. ರೋಡಿನಲ್ಲಿ ಪ್ರತಿಭಟನೆ

30/06/2024, 13:24

ಬಿ.ಸಿ.ರೋಡ್(reporterkarnataka.com): ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐಓ ಪಾಣೆಮಂಗಳೂರು ಶಾಖೆಯ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಕಾನೂನು ವಿದ್ಯಾರ್ಥಿ ನಿಹಾಲ್ ಕುದ್ರೋಳಿ , ಜಿಲ್ಲಾ ಕಾರ್ಯದರ್ಶಿ ಸಲ್ವಾನ್ ಬೋಳಂಗಡಿ, ಪಾಣೆಮಂಗಳೂರು ಶಾಖಾಧ್ಯಕ್ಷ ಮುತಹ್ಹರ್ ಸಾಬ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು