ಇತ್ತೀಚಿನ ಸುದ್ದಿ
ಹಂಸ ಮೊಯ್ಲಿ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಂತಾಪ
30/06/2024, 21:55

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರ ಅಕಾಲಿಕ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಂಸ ಮೊಯ್ಲಿ ಅವರು ವಿಧಿವಶರಾದ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಅವರ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ಕರುಣಿಸಲಿ, ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೆಯೊಂದರಲ್ಲಿ ಅವರು ತಿಳಿಸಿದ್ದಾರೆ.