5:47 AM Sunday6 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ

04/07/2024, 21:03

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ. ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ ಆಚರಿಸುವ ಬಹುತೇಕ ಹಬ್ಬಗಳು ಹಳ್ಳಿಯ ಸೊಗಡಿನೊಂದಿಗೆ ಸಮ್ಮಿಲಿತಗೊಂಡಿವೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಹುತೇಕ ಹಬ್ಬಗಳ ಹಿನ್ನೆಲೆಯನ್ನು ಒಳಗೊಂಡಿವೆ .
ಮಳೆಗಾಲದಲ್ಲಿ ಬರುವ ವಿಶೇಷ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಮಳೆಗಾಲದ ಪ್ರಾರಂಭದ ದಿನಗಳಲ್ಲಿ ಬರುವ ಈ ಹಬ್ಬ ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡುತ್ತದೆ. ಮುಂಗಾರು ಪ್ರಾರಂಭವಾಗಿ ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿ ಹೊಲಗಳನ್ನು ಹಸನು ಮಾಡಿ ಬಿತ್ತನೆ ಹಾಗೂ ನಾಟಿಯನ್ನು ಮಾಡಿರುತ್ತಾರೆ. ಹೊಲಗಳು ಹಸಿರಿನಿಂದ ಕಂಗೊಳಿಸುತ್ತಿರುತ್ತವೆ ಇಂತಹ ದಿನಗಳಲ್ಲಿ ರೈತರು ವಿಶ್ರಾಂತಿಯನ್ನು ಪಡೆಯುವ ಜೊತೆಗೆ ತಮ್ಮ ಒಡನಾಡಿಯಾದ ಜಾನುವಾರುಗಳನ್ನು, ಎತ್ತುಗಳನ್ನು ಪ್ರೀತಿಯಿಂದ ಪೋಷಿಸುತ್ತಾರೆ .ಕಾರ ಹುಣ್ಣಿಮೆಯ ನಂತರ ಬರುವ ಮಣ್ಣೆತ್ತಿನ ಅಮವಾಸೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಹು ಸಂಭ್ರಮದ ಹಬ್ಬ .
ರೈತರ ಒಡನಾಡಿ ಹಾಗೂ ರೈತರ ಉಸಿರೆಂದರೆ ಎತ್ತುಗಳು ಎತ್ತುಗಳೊಂದಿಗೆ ರೈತರು ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ. ಎತ್ತುಗಳನ್ನು ಕೇವಲ ಪ್ರಾಣಿಗಳೆಂದು ಪರಿಗಣಿಸದೆ ತಮ್ಮ ಮನೆಯ ಸದಸ್ಯರಂದೇ ಪರಿಗಣಿಸಿ ಅವುಗಳನ್ನು ಪ್ರೀತಿಯಿಂದ ಅಕ್ಕರೆಯಿಂದ ಸಾಕುತ್ತಿರುತ್ತಾರೆ. ರಾಮ, ಲಕ್ಷ್ಮಣ ಭೀಮ, ಕರಿಯ, ಚೆನ್ನ,ಬಸವ, ಕೆಂಪ ಹಾಗೂ ತಮ್ಮ ನೆಚ್ಚಿನ ನಾಯಕ ನಟರ ಹೆಸರನ್ನು ತಮ್ಮ ಪ್ರೀತಿಯ ಎತ್ತುಗಳಿಗೆ ಇಟ್ಟು ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ರೈತರ ಕಷ್ಟ ,ಸುಖಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಎತ್ತುಗಳಿಗೆ ರೈತರು ಅಪಾರ ಗೌರವವನ್ನು ನೀಡುತ್ತಾರೆ .

ಮಣ್ಣೆತ್ತಿನ ಅಮಾವಾಸ್ಯೆ ದಿನದ ಮೊದಲೇ ಹಳ್ಳ, ಹೊಳೆ, ಗದ್ದೆಗಳಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮಾಡಿ ಎತ್ತುಗಳಿಗೆ ಮೇವು ಹಾಕುವ ಒಂದು ಗೋದಲಿಯನ್ನು ಮಾಡುತ್ತಾರೆ. ಎತ್ತುಗಳನ್ನು ಮಣ್ಣಿನಿಂದಲೇ ಮಾಡಿ ಅವುಗಳನ್ನು ದೇವರ ಮನೆಯ ಜಗಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಇನ್ನೂ ಕೆಲವರು ಹೊಲಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ.
ರೈತ ಹಾಗೂ ಎತ್ತುಗಳಿಗೆ ಅವಿನಾಭಾವ ಸಂಬಂಧ ಶತಶತಮಾನಗಳಿಂದ ಇದೆ. ಭಾರತದ ಪ್ರತಿಯೊಂದು ಕೃಷಿ ಕುಟುಂಬವು ಕೃಷಿಯೊಂದಿಗೆ ಹಾಗೂ ಮಣ್ಣಿನೊಂದಿಗೆ ಅವಿನಾಭಾವ ಸಂಬಂಧದ ನಂಟಿದೆ. ಮಳೆಗಾಲದಲ್ಲಿ ಬಿತ್ತನೆಯಾಗಿ ಬೆಳೆ ಬೆಳೆದು ಹಸಿರಿನಿಂದ ಭೂಮಿ ಕಂಗೊಳಿಸುತ್ತಿರುವ ಈ ದಿನಗಳಲ್ಲಿ ಕೃಷಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಗೌರವಿಸುವ ಮೂಲಕ ಈ ದಿನಗಳಲ್ಲಿ ಶ್ರಮ ಶ್ರಮ ಸಂಸ್ಕೃತಿಯನ್ನು ಗೌರವಿಸುವ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ .
ಹಳ್ಳಿಗಳಲ್ಲಿ ಕುಂಬಾರರು ತಯಾರಿಸಿದ ಸುಂದರವಾದ ಎತ್ತುಗಳನ್ನು ಕೊಂಡು ತಂದು ಅವುಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿ ಸಂತೋಷಪಡುವರು. ರೈತರು ಹಿಂದೆ ಎತ್ತುಗಳನ್ನು ಕೊಟ್ಟು ಅದರ ಬದಲಾಗಿ ದವಸ ಧಾನ್ಯಗಳನ್ನು ಪಡೆಯುತ್ತಿದ್ದರು. ಇಂದು ನಗರೀಕರಣದ ಪರಿಣಾಮ ಎತ್ತುಗಳು ಮಾರಾಟದ ಸರಕಾಗಿ ಪರಿಣಮಿಸಿವೆ. ಆದರೂ ಇನ್ನೂ ಹಳ್ಳಿಗಳಲ್ಲಿ ಎತ್ತುಗಳನ್ನು ಪೂಜ್ಯನೀಯ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ .ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಕ್ಕಳಿಗೆ ಸಂಭ್ರಮದ ಹಬ್ಬ . ಹಬ್ಬದ ಮರುದಿನ ಮಕ್ಕಳು ಮನೆ ಮನೆಗೆ ತೆರಳಿ ಕುಂಟೆತ್ತು ಬಂದಿದೆ ಅಂತ ಹೇಳಿ ಅಕ್ಕಿ, ಜೋಳ, ಕಾಳು, ಬೆಲ್ಲ ತಂದು ಅವುಗಳಿಂದ ಸಿಹಿ ಅಡಿಗೆ ಮಾಡಿಕೊಂಡು ಎಲ್ಲ ಮಕ್ಕಳು ಊಟ ಮಾಡಿ ಎತ್ತುಗಳಿಗೆ ಮತ್ತೊಮ್ಮೆ ಪೂಜೆ ಸಲ್ಲಿಸಿ ಅವುಗಳನ್ನು ವಿಸರ್ಜಿಸುವ ಪದ್ಧತಿ ರೂಢಿ ಇದೆ. ಮಕ್ಕಳೆಲ್ಲ ಸಂಭ್ರಮದಿಂದ ಈ ಕಾರ್ಯದಲ್ಲಿ ಭಾಗವಹಿಸಿ ಮಣ್ಣೆತ್ತಿನ ಅಮಾವಾಸ್ಯೆ ಯನ್ನು ಜೀವಂತವಾಗಿಸುವ ಕಾರ್ಯವನ್ನು ಈಗಲೂ ಮಾಡುತ್ತಿದ್ದಾರೆ .
ಈಗೀಗ ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಯಂತ್ರಗಳನ್ನು ಹಾಗೂ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿರುವ ಕಾರಣದಿಂದ ಎತ್ತುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ರೈತರ ಒಡನಾಡಿಯಾದ ಎತ್ತುಗಳು ಇಂದು ಪ್ರತಿಷ್ಠೆಯ ಪ್ರತೀಕವಾಗಿ ಇನ್ನೂ ಕುಟುಂಬದ ಕೆಲವರು ಲಕ್ಷ ಲಕ್ಷ ಹಣ ಕೊಟ್ಟು ಖರೀದಿಸಿ ಮನೆಗೆ ತಂದು ಎತ್ತುಗಳನ್ನು ಸಾಕುತ್ತಿದ್ದಾರೆ. ಎತ್ತುಗಳು ನಮ್ಮ ಅನ್ನದಾತರ ಗೌರವ ಪ್ರತೀಕ. ನಾವೆಲ್ಲರೂ ಕುಳಿತು ಊಟ ಮಾಡುವ ಪ್ರತಿಯೊಂದು ಅನ್ನದ ಅಗಳಿನ ಹಿಂದೆ ಕೋಟಿಗಟ್ಟಲೆ ರೈತರ ಶ್ರಮ ಇದೆ .ಆ ಶ್ರಮದ ಹಿಂದೆ ಎತ್ತುಗಳ ಒಡೆಯನಾದ ರೈತನ ಮೇಲಿನ ಪ್ರೀತಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು