9:15 PM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಮೈಸೂರು ನೂತನ ಜಿಲ್ಲಾಧಿಕಾರಿಗಳಿಗೆ ನಂಜನಗೂಡು ಜನಸ್ಪಂದನ ಸಭೆಯಲ್ಲಿ ಸಾಲು ಸಾಲು ಸವಾಲುಗಳು!!

05/07/2024, 18:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅಧಿಕಾರ ಸ್ವೀಕರಿಸಿದ ದಿನವೇ ದಕ್ಷಿಣ ಕಾಶಿ ನಂಜನಗೂಡು ನಗರದ ಡಾ. ಬಿ‌.ಆರ್. ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಜನಸ್ಪಂದನ ಕಾರ್ಯಕ್ರಮ ಪ್ರಾರಂಭವಾಗುತ್ತಿದ್ದಂತೆ ಸಾಕಷ್ಟು ವರ್ಷಗಳಿಂದ ಬಗೆಹರಿಸಲಾಗದ ಕಂದಾಯ, ಅಬಕಾರಿ, ನಗರ ಸಭೆ, ಪೊಲೀಸ್, ಲೋಕೋಪಯೋಗಿ, ಪಂಚಾಯತ್ ರಾಜ್, ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿಗಳ ಸಮಸ್ಯೆಗಳ ಮಹಾಪೂರವೇ ಸಭೆಯಲ್ಲಿ ಪ್ರಸ್ತಾಪವಾಯಿತು. ನಂಜನಗೂಡು ಪಟ್ಟಣವೂ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳ್ಳತನ, ಸುಲಿಗೆ, ಕ್ರಿಮಿನಲ್ ಪ್ರಕರಣಗಳಿಗೆ ಕಡಿವಾಣವಿಲ್ಲದಂತಾಗಿದೆ ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮ ಮಧ್ಯ ಮಾರಾಟವಾಗುತ್ತಿದೆ. ಸರ್ಕಾರ ಜಾರಿ ಮಾಡಿರುವ ಐದು ಭಾಗ್ಯಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂ
ಗಳನ್ನು ಕೂಡ ಪತ್ನಿಯಿಂದ ಪಡೆದುಕೊಂಡು ಅಕ್ರಮ ಮಧ್ಯಕ್ಕೆ ವ್ಯಯ ಮಾಡುತ್ತಿದ್ದಾರೆ. ಸಿಎಂ ತವರು ಕ್ಷೇತ್ರದಲ್ಲಿ ಸಂಪೂರ್ಣವಾಗಿ ಅಕ್ರಮ ಮದ್ಯ ಮಾರಾಟವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಮತ್ತು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮಧ್ಯವರ್ತಿ ದಲ್ಲಾಳಿಗಳ ಹಾವಳಿ ಎಲ್ಲೆ ಮೀರಿದೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ರೈತರ ಬಡವರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ನಂಜನಗೂಡು ತಾಲ್ಲೂಕಿನ ಸಾಕಷ್ಟು ಗ್ರಾಮಗಳಲ್ಲಿ ಶಾಲಾ ಕೊಠಡಿಗಳು ಶಿಥಿಲ ವ್ಯವಸ್ಥೆಯಿಂದ ಕೂಡಿದೆ ಕೆಲವು ಶಾಲೆಗಳಿಗೆ ರಸ್ತೆಗಳ ಸಂಪರ್ಕವನ್ನೇ ಕಲ್ಪಿಸಿಲ್ಲ. ಬದುಕಿರುವವರಿಗೆ ಮರಣ ಪತ್ರ ನೀಡಿದ ಪ್ರಕರಣದಲ್ಲಿ ಕಂದಾಯ ಇಲಾಖೆಯ ಆರ್
ಐ ಪ್ರಕಾಶ್ ಎಂಬವರನ್ನು ಅಮಾನತುಪಡಿಸದೆ ಇರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕೂಡಲೇ ಕೆಲಸದಿಂದ ವಜಾ ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ದೂರು ನೀಡಿದರು. ಕೆಲ ಸಮಸ್ಯೆಗಳನ್ನು ಆಲಿಸಿದ ನೂತನ ಜಿಲ್ಲಾಧಿಕಾರಿಗಳು ಶಾಕ್ ಆಗಿ ಮೌನವಹಿಸಿದರು. ಮುಖ್ಯಮಂತ್ರಿಗಳ ತವರು ಕ್ಷೇತ್ರವಾಗಿರುವ ದೆಸೆಯಿಂದ ಮೈಸೂರು ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಜಾಗೃತಿಯಿಂದ ಜನರ ಸೇವೆ ಮಾಡಬೇಕು. ಬಂದವರ ಕಷ್ಟ ಪರಿಹರಿಸುವ ಸಲುವಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲಿ ಸರ್ಕಾರಿ ಸೇವೆಯಲ್ಲಿ ಲೋಪ ಬರುತ್ತದೆ ಅದನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ 80ಕ್ಕೂ ಹೆಚ್ಚು ಅರ್ಜಿಗಳು ಮತ್ತು ಸಮಸ್ಯೆಗಳು ಕಂಡುಬಂದಿದೆ. ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲು ನಾನು ಮುಂದಾಗುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಶಾಂತ್ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ, ಕಾರ್ಯದರ್ಶಿ ಕೃಷ್ಣ ರಾಜು, ಡಿ ವೈ ಎಸ್ ಪಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು