4:57 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಕೃಷ್ಣಾಪುರ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ, ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿ ಉದ್ಘಾಟನೆ

10/07/2024, 20:59

ಸುರತ್ಕಲ್(reporterkarnataka.com): ಮಂಗಳೂರು ಉತ್ತರದ ಕೃಷ್ಣಾಪುರ 5 ನೇ ಬ್ಲಾಕಿನ ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.
ಶಾಸಕ ಡಾ. ಭರತ್ ಶೆಟ್ಟಿ ವೈ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಢಿಸಿಕೊಂಡು ಅಮೂಲ್ಯ ಪ್ರಜೆಗಳಾಗಬೇಕು. ಪೂರಕವಾಗಿ ಯೋಗ್ಯ ಪರಿಸರವು ರೂಪುಗೊಳ್ಳಬೇಕು. ಸರ್ವರೂ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಆಶಿಸಿದರು.
ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕವನ್ನು ವಿತರಿಸಲಾಯಿತು.
ಲೋಕೋಪಯೋಗಿ ಇಲಾಖೆಯ ಮಂಗಳೂರು ವರ್ತುಲ ಅಧೀಕ್ಷಕ ಅಭಿಯಂತರ ಗೋಕುಲ್ ದಾಸ್ ಶುಭ ಹಾರೈಸಿದರು.
ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮೀ ಶೇಖರ್ ದೇವಾಡಿಗ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೃಕ್ಷಾರೋಪಣ ಮಾಡಲಾಯಿತು.
ಗುತ್ತಿಗೆದಾರ ಕಬೀರ್ ಅವರನ್ನು ಗೌರವಿಸಲಾಯಿತು.
ಮಾಜಿ ಕಾರ್ಪೋರೇಟರ್ ತಿಲಕ್ ರಾಜ್ ಕೃಷ್ಣಾಪುರ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಪಿ. ಸುಧಾಕರ ಕಾಮತ್, ಅಧ್ಯಕ್ಷ ಅಶೋಕ್ ಕೃಷ್ಣಾಪುರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕರುಣಾಕರ ದೇವಾಡಿಗ ಮತ್ತು ಮಧುಸೂದನ್ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯೋಪಾದ್ಯಾಯಿನಿ ವೀಣಾ ಬೇಳಂಜೆ ಸ್ವಾಗತಿಸಿ, ಚಂದ್ರಾವತಿ ವಂದಿಸಿದರು. ಸೌಮ್ಯ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು