8:36 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ನೀಲಿ ಬಾವುಟಗಳ ಅಬ್ಬರ: ಸಂಭ್ರಮ – ಸಡಗರದಿಂದ ನಡೆದ ಡಾ.ಅಂಬೇಡ್ಕರ್ ಜಯಂತೋತ್ಸವ

10/07/2024, 21:02

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com

ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ಅವರ ನೇತೃತ್ವದಲ್ಲಿ ತಾಲ್ಲೂಕಿನ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಮೆರವಣಿಗೆಯನ್ನು ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ನಂಜನಗೂಡು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂಬೇಡ್ಕರ್ ಭಾವಚಿತ್ರ ಹೊತ್ತ ಬೆಳ್ಳಿರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ದರ್ಶನ್ ಧ್ರುವ ನಾರಾಯಣ್ ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ದರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಹಾಗೂ
ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು.
ಪಟ್ಟಣದ ಆರ್.ಪಿ. ರಸ್ತೆ ಮೂಲಕ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದವರೆಗೆ ನಡೆದ ಮೆರವಣಿಗೆಯಲ್ಲಿ ಜೈ ಭೀಮ್ ಜೈ ಭೀಮ್ ಎಂದು ಜೈ ಘೋಷ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಸ್ತಬ್ಧಚಿತ್ರ, ಸಂವಿಧಾನದ ಪೀಠಿಕೆ ಮತ್ತು ಅಂಬೇಡ್ಕರ್ ಸಂದೇಶವುಳ್ಳ ಸ್ತಬ್ಧಚಿತ್ರ, ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಸ್ತಬ್ಧ ಚಿತ್ರ, ಬಾಲ್ಯ ವಿವಾಹದ ಬಗ್ಗೆ ಬೀದಿ ನಾಟಕ ಪ್ರದರ್ಶನ ಮಂಗಳವಾದ್ಯ ಮತ್ತು ನಗಾರಿ ತಮಟೆಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು
ದಲಿತ ಸಂಘಟನೆಗಳ ಮುಖಂಡರು ಮತ್ತು ಮತ್ತು ಯುವಕರು ನೀಲಿ ಬಾವುಟಗಳನ್ನು ಪ್ರದರ್ಶನ ಮಾಡಿ ಅಂಬೇಡ್ಕರ್ ಸ್ಲೋಗನ್ ಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು.
ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಸೇರಿದಂತೆ ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು