ಇತ್ತೀಚಿನ ಸುದ್ದಿ
11 ಅಕ್ರಮ ಆಸ್ತಿ ಪ್ರಕರಣ: ರಾಜ್ಯಾದ್ಯಂತ 56 ಕಡೆಗಳಿಗೆ ಲೋಕಾಯುಕ್ತ ದಾಳಿ; 100 ಅಧಿಕಾರಿಗಳಿಂದ ಶೋಧ
11/07/2024, 21:50
ಮೃದುಲಾ ನಾಯರ್ ಬೆಂಗಳೂರು
info.reporterkarnataka@gmail.com
ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 56 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
11 ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ ನಡೆದಿದೆ.
ದಾವಣಗೆರೆ, ಚಿತ್ರದುರ್ಗ, ಕೋಲಾರ, ಮಂಡ್ಯ, ಕಲಬುರಗಿ, ಮೈಸೂರು, ಹಾಸನ, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ 56 ಸ್ಥಳಗಳಲ್ಲಿ ಸುಮಾರು 100 ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕಾರ್ಯಪಾಲಕ ಅಭಿಯಂತರರು, ತಹಶೀಲ್ದಾರ್, ಕಾರ್ಯದರ್ಶಿಗಳು ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಕೆಂಗೇರಿ ವಲಯದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಂದಾಯ ಅಧಿಕಾರಿ ಬಸವರಾಜ ಮಾಗಿ; ಮಂಡ್ಯ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಶಿವರಾಜು ಎಸ್ . ಎಂ ರವೀಂದ್ರ, ಬೆಂಗಳೂರಿನ ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಇಂಜಿನಿಯರ್; ಯೋಜನಾ ನಿರ್ದೇಶಕರಾದ ಶೇಖರಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹದೇವ ಬನ್ನೂರು, ಡಿ ಹೆಚ್ ಉಮೇಶ್, ಕಾರ್ಯಪಾಲಕ ಅಭಿಯಂತರರು ಮತ್ತು ಎಂ ಎಸ್ ಪ್ರಭಾಕರ್, ದಾವಣಗೆರೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದವರೆಗೂ ಕಾರ್ಯಾಚರಣೆ ಮುಂದುವರಿದಿದ್ದು, ತಹಶೀಲ್ದಾರ್ ವಿಜಿಯಣ್ಣ ಅವರ ವಿಚಾರಣೆ ನಡೆಯುತ್ತಿದೆ. ಮೈಸೂರಿನಲ್ಲಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಮಹೇಶ್ ಕೆ, ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಎನ್ ಎಂ ಜಗದೀಶ್, ಚಿತ್ರದುರ್ಗದಲ್ಲಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಕೆ ಜಿ ಜಗದೀಶ್ ವಿರುದ್ಧವೂ ದಾಳಿ ನಡೆದಿದೆ.