2:46 PM Sunday12 - January 2025
ಬ್ರೇಕಿಂಗ್ ನ್ಯೂಸ್
ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಖ್ಯಾತ ನಿರೂಪಕಿ, ಕನ್ನಡದ ಒಡತಿ ಅಪರ್ಣಾ ಇನ್ನಿಲ್ಲ: ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ನೆನಪು ಮಾತ್ರ

11/07/2024, 23:30

ಬೆಂಗಳೂರು(reporterkarnataka.com): ಖ್ಯಾತ ನಿರೂಪಕಿ, ಅಪ್ಪಟ ಕನ್ನಡತಿ, ಚಿತ್ರನಟಿ ಅಪರ್ಣಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತನ್ನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು.


ದೂರದರ್ಶನ ಚಂದನದಲ್ಲಿ ನಿರೂಪಕಿಯಾಗಿದ್ದ ಅವರು
ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಲ್ಲಿ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಗಮನ ಸೆಳೆದಿದ್ದರು. ನಂತರ ಅವರು ನಿರೂಪಕಿಯಾಗಿಯೇ ಕನ್ನಡಿಗರ ಮನ ಗೆದ್ದಿದ್ದರು. ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿದ್ದರು. ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೆಟ್ರೋ, ಕೆಎಸ್ಸಾರ್ಟಿಸಿಯಲ್ಲಿ ಅವರ ಧ್ವನಿಯನ್ನು ಈಗಲೂ ಕೇಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು