ಇತ್ತೀಚಿನ ಸುದ್ದಿ
ದ.ಕ. ಜಿಲ್ಲೆಯಲ್ಲಿ ಬಿರುಸಿನ ಗಾಳಿ ಮಳೆ: ನಾಳೆಯೂ ಶಾಲೆ-ಪಿಯು ಕಾಲೇಜುಗಳಿಗೆ ರಜೆ
15/07/2024, 20:27
ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ(ಜುಲೈ 16) ದ.ಕ. ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ,ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ.