10:47 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಜ್ಯುವೆಲ್ಸ್ ನಿಂದ ಮಹಿಳಾ ಜಾಗೃತಿ ಕಾರ್ಯಕ್ರಮ: ಮಹಿಳಾ ಠಾಣೆ, ರೋಟರಿ ಕ್ಲಬ್ ಸಾಥ್

17/07/2024, 23:27

ಪುತ್ತೂರು(reporterkarnataka.com): ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ್ಥೆಯ ಸಿಬ್ಬಂದಿಗಳಿಗೆ ಸೇರಿ ಆಸುಪಾಸಿನ ಜನರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹೇಳಿದರು.
ಬುಧವಾರ ಜೆಸಿಐ ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಮುಳಿಯ ಜ್ಯುವೆಲ್ಸ್ ಪುತ್ತೂರು, ಮಹಿಳಾ ಪೊಲೀಸ್ ಠಾಣೆ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ ಸಹಯೋಗದಲ್ಲಿ ನಡೆದ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪುತ್ತೂರು ಮಹಿಳಾ ಠಾಣೆಯಾ ಉಪನಿರೀಕ್ಷಕಿ ಭವಾನಿ ಮಾತನಾಡಿ ಪೊಕ್ಸೋ ಕಾಯ್ದೆಯಲ್ಲಿ ೧೮ ವರ್ಷದ ಒಳಗಿನ ಗಂಡು ಹೆಣ್ಣು ಬೇಧವಿಲ್ಲದೆ ಮಕ್ಕಳೆಂದು ಪರಿಗಣಿಸಲಾಗುತ್ತದೆ. ಪ್ರಕರಣಗಳಲ್ಲಿ ದೂರು ದಾಖಲಾದಾಗ ಕೇವಲ ಆರೋಪಿಗಳಾಗಿದ್ದರೆ, ಪೊಕ್ಸೋದಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಅವರು ಅಪರಾಧಿಗಳಾಗಿರುತ್ತಾರೆ. ಪೋಷಕರು ತಮ್ಮ ಮಕ್ಕಳ ಚಲನವಲಗಳ ಬಗ್ಗೆ ನಿಗಾ ಇಡುವ ಜತೆಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ತಿಳಿಸಿದರು.

ಪೊಲೀಸ್ ಸಿಬ್ಬಂದಿಗಳಿಗೆ ಮುಳಿಯ ಜ್ಯುವೆಲ್ಸ್ ವತಿಯಿಂದ ರೈನ್ ಕೋಟ್ ವಿತರಣೆ ಮಾಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಪುತ್ತೂರು ಮಹಿಳಾ ಠಾಣೆಯಾ ಉಪನಿರೀಕ್ಷಕಿ ಸರಿತಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು