12:37 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಪ್ರವಾಹ ಭೀತಿ ಹಿನ್ನೆಲೆ: ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ

19/07/2024, 00:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ, ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ನಗರದ ಹಳ್ಳಿಕೇರಿ, ಹದಿನಾರು ಕಾಲು ಮಂಟಪ, ಸ್ನಾನಘಟ್ಟ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂಜನಗೂಡು ತಾಲ್ಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ, ಬೊಕ್ಕ ಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನಗರದ ಹಳ್ಳದಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತವಾಗಿದ್ದು, ನಿವಾಸಿ ಮಹಿಳೆಯೊಬ್ಬರು ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಈ ಕೂಡಲೇ ನಿವಾಸಿಗಳನ್ನು ಗಿರಿಜಾ ಕಲ್ಯಾಣ ಮಂಟಪಕ್ಕೆ ಸ್ಥಳಾಂತರ ಮಾಡಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು