3:53 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಭಾರೀ ಹೆಚ್ಚಳ: ತಗ್ಗು ಪ್ರದೇಶ ಮುಳುಗಡೆ; ಆಲಡ್ಕ ಪರಿಸರದಲ್ಲಿ ಮನೆಗಳು ಜಲಾವೃತ

19/07/2024, 21:23

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಮಳೆಯಿಂದ ಜಿಲ್ಲೆಯ ಹಲವೆಡೆ ತಗ್ಗು ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಗಳೂರು ತಾಲೂಕಿನ ಬಜಪೆ ಸಮೀಪದ ಅದ್ಯಪಾಡಿಯಲ್ಲಿ ನೆರೆ ನೀರು ನುಗ್ಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಆನಂದ ಹಾಗೂ ಹಿರಿಯ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು, ಆಲಡ್ಕ, ನಂದಾವರ, ಜಕ್ರಿಬೆಟ್ಟು, ಬ್ರಹ್ಮರಕೂಟ್ಲು ಪ್ರದೇಶದಲ್ಲಿ ಪ್ರವಾಹ ತಲೆದೋರಿದೆ.


ಬಂಟ್ವಾಳದಲ್ಲಿ ನೇತ್ರಾವತಿ ನದಿಯ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ, ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗಳು ಜಲಾವೃತಗೊಂಡಿವೆ.
ಸಂಗಬೆಟ್ಟು ಗ್ರಾಮದ ಪರನೀರು ಮನೆಯ ನಾಗೇಶ ಪೂಜಾರಿ
ಅವರ ವಾಸ್ತವ್ಯದ ಮನೆಯ ಸಮೀಪ ರೂಟ್ಟಿ ತಯಾರಿಕ ಕೊಠಡಿಗೆ ಮರ ಬಿದ್ದು ಹಾನಿ ಉಂಟಾಗಿದೆ. ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ರಾಘವ ಎಂಬವರಿಗೆ ಸೇರಿದ ಕೋಳಿ ಫಾರಂ ಸಂಪೂರ್ಣ ಹಾನಿಗೀಡಾಗಿದೆ. ಕೊಯಿಲಾ ಗ್ರಾಮದ ಅಂತರಾ ಎಂಬಲ್ಲಿ ಗ್ರಾಮ ಪಂಚಾಯತ್ ರಸ್ತೆಯ ಬದಿಯಲ್ಲಿರುವ ಗುಡ್ಡ ಕುಸಿದಿದೆ. ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಬಂಟ್ವಾಳ ಪರಿಸರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಆನಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು