8:35 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕೋವಿಡ್ ಸಿಬ್ಬಂದಿಗಳಿಗೆ ವಿಳಂಬ ಮಾಡದೆ ವೇತನ ಪಾವತಿಸಿ, ಇಲ್ಲದಿದ್ದರೆ ಕಾನೂನು ಕ್ರಮ: ಸಚಿವ ಅಂಗಾರ ಎಚ್ಚರಿಕೆ

24/08/2021, 08:36

ಮಂಗಳೂರು (reporterkarnataka.com): ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವಿಳಂಬಕ್ಕೆ ಆಸ್ಪದವಿಲ್ಲದಂತೆ ವೇತನ ನೀಡಬೇಕು, ತಪ್ಪಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಬದ್ದ ಕ್ರಮ ಕೈಗೊಳ್ಳುವಂತೆ ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮೊದಲೇ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿದೆ. ಅದರ ನಿರ್ವಹಣೆ, ನಿಯಂತ್ರಣ ಹಾಗೂ ಶುಶ್ರೂಷೆಯಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಕಾಲಕಾಲಕ್ಕೆ ವೇತನ ಪಾವತಿಸುವುದು ಸಂಬಂಧಿಸಿದ ಅಧಿಕಾರಿಗಳ ಕರ್ತವ್ಯ, ಈ ಹಿನ್ನೆಲೆಯಲ್ಲಿ ಲ್ಯಾಬ್ ಟೆಕ್ನಿಷಿಯನ್‍ಗಳು, ಸ್ಟಾಫ್ ನರ್ಸ್‍ಗಳು ಹಾಗೂ ಊಟ ಉಪಹಾರ ಒದಗಿಸುವ ಕ್ಯಾಂಟೀನ್‍ಗಳಿಗೆ ಕಾಲಕಾಲಕ್ಕೆ ಅವರ ವೇತನ ಪಾವತಿಸಬೇಕು. ಇದರಲ್ಲಿ ವಿಳಂಬ ತೋರುವ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ಅವರನ್ನು ಅಮಾನತು ಮಾಡುವಂತೆ ಸಚಿವರು ಸೂಚಿಸಿದರು.

ಕೋವಿಡ್ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ನೀಡಲಾಗುತ್ತಿದೆ. ಸಮಸ್ಯೆಗಳಿದ್ದಲ್ಲಿ ಇತ್ಯರ್ಥಪಡಿಸಿಕೊಂಡು ಕ್ರಮವಹಿಸಲು ತಿಳಿಸಲಾಗಿದೆ, ಆದಾಗ್ಯೂ ಅಧಿಕಾರಿಗಳ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಮಾತನಾಡಿ, ಇದಕ್ಕೆ ಸಂಬಂಧಿಸಿದಂತೆ ಈ ತಿಂಗಳ ಅಂತ್ಯದೊಳಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲಾ ತಹಶೀಲ್ದಾರರು ತಿಂಗಳ 5 ತಾರೀಖಿನೊಳಗೆ ಸಂಬಂಧಿಸಿದ ಸಿಬ್ಬಂದಿಗಳಿಗೆ ವೇತನ ಪಾವತಿಸಬೇಕು, ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು.  ಇಲ್ಲದಿದ್ದರೇ ಸಂಬಂಧಿಸಿದ ತಹಶೀಲ್ದಾರರಿಗೆ ನೋಟೀಸ್ ನೀಡಿ, ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಎಲ್ಲಾ ತಾಲೂಕುಗಳಲ್ಲಿಯೂ ಹೆಚ್ಚಿನ ತಪಾಸಣೆ ನಡೆಸಬೇಕು, ಆದಷ್ಟು ಹೆಚ್ಚಾಗಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಜನ ಯಾವ ವೇಳೆಯಲ್ಲಿ ಹೆಚ್ಚಾಗಿ ಲಭ್ಯವಾಗುತ್ತಾರೋ ಆಗ ಪರೀಕ್ಷೆಗಳನ್ನು ನಡೆಸುವುದು ಉತ್ತಮ ಎಂದ ಜಿಲ್ಲಾಧಿಕಾರಿಯವರು, ಜಿಲ್ಲೆಯಲ್ಲಿ ಪ್ರತಿನಿತ್ಯ 11,000 ಪರೀಕ್ಷೆ ಮಾಡಲಾಗುತ್ತಿದೆ, ಅದನ್ನು 15 ಸಾವಿರಕ್ಕೆ ಹೆಚ್ಚಿಸಲಾಗುವುದು, ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಕನಿಷ್ಠ 20 ಮಂದಿಯನ್ನು ತಪಾಸಣೆ ಮಾಡಬೇಕು, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ 180 ರಿಂದ 200 ತಪಾಸಣೆಗಳು ಆಗಬೇಕು, ಪ್ರತಿ ಲ್ಯಾಬ್ ಟೆಕ್ನಿಷಿಯನ್‍ಗಳು 50 ಸ್ವ್ಯಾಬ್ ಟೆಸ್ಟಿಂಗ್ ಮಾಡಲೇಬೇಕು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಾಹನಗಳನ್ನು ಹಾಗೂ ಅಗತ್ಯ ಸಂಖ್ಯೆಯ ಲ್ಯಾಬ್ ಟೆಕ್ನಿಷಿಯನ್‍ಗಳನ್ನು ಒದಗಿಸಲಾಗಿದೆ ಎಂದರು.

ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರು ಮಾತನಾಡಿ, ಕೋವಿಡ್ ತಪಾಸಣೆಯನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯವಿರುವ ಕ್ರಮ ಹಾಗೂ ಬೇಕಾದ ಸಿಬ್ಬಂದಿಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು