9:24 AM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ: ಕಾರ್ಯಕರ್ತರ ಸಮ್ಮಿಲನ

21/07/2024, 12:08

ಮಂಗಳೂರು(reporterkarnataka.com): ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಶನಿವಾರ ನಗರದ ಉರ್ವ ಸ್ಟೋರ್ ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು.
ಅಭಿನಂದನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತನಾಡಿದ ಆರ್.ಪದ್ಮರಾಜ್ ಪೂಜಾರಿಯವರು, “ನಾವು ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ. ಆದರೆ ಮತ ಗಳಿಕೆಯಲ್ಲಿ ಹಿಂದಿದ್ದೇವೆ. ದೇಶದ ಸಂವಿಧಾನದ ಆಶೋತ್ತರಗಳಿಗೆ ಸ್ಪಂದಿಸುವ ಏಕೈಕ ಪಕ್ಷ ಏನಾದರು ಇದ್ದರೆ ಅದು ಕಾಂಗ್ರೆಸ್ ಪಕ್ಷ, ಹೀಗಾಗಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ನಾವೆಲ್ಲರೂ ಚಿಂತಿಸಿ ಕಾರ್ಯೋನ್ಮುಖರಾಗಬೇಕಿದೆ. ವಿವಿಧ ನಿಗಮಗಳಿಗೆ ಆಯ್ಕೆಯಾಗಿರುವ ನಮ್ಮ ಕಾರ್ಯಕರ್ತರು ಮುಂದೆ ಉತ್ತಮ ರೀತಿಯಲ್ಲಿ ಪಕ್ಷ ನಿಷ್ಠೆಯಿಂದ ಸೇವೆ ಸಲ್ಲಿಸಲಿ“ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ”ಕಾಂಗ್ರೆಸ್ ಪಕ್ಷದಲ್ಲಿ ನೂತನವಾಗಿ ಜವಾಬ್ದಾರಿ ವಹಿಸಿಕೊಂಡ ಎಲ್ಲರಿಗೂ ಅಭಿನಂದನೆಗಳು. ಮುಂದೆ ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆ ಮತ್ತು ಇನ್ನಿತರ ಚುನಾವಣೆಗಳಲ್ಲಿ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಧ್ಯೇಯವಾಗಿರಲಿ“ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿ, “ಐವನ್ ಡಿಸೋಜ ಅವರು ಕಾಂಗ್ರೆಸ್ ಪಕ್ಷದ ಒಂದು ಶಕ್ತಿ. ಇಲ್ಲಿರುವ ಎಲ್ಲರೂ ಪಕ್ಷದ ನಿಷ್ಠೆಯಿಂದ ದುಡಿಯುತ್ತಿರುವವರು. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹ ಹುರುಪಿನಿಂದ ದುಡಿದು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸೋಣ” ಎಂದು ಕರೆ ನೀಡಿದರು.
ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯಐವನ್ ಡಿಸೋಜ, ಪ್ರವೀಣ್ ಚಂದ್ರ ಆಳ್ವ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಸುರೇಶ್ ಬಳ್ಳಾಲ್, ವಿಶ್ವಾಸ್ ಕುಮಾರ್ ದಾಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕುಮಾರಿ ಅಪ್ಪಿ, ಮಾಜಿ ಮೇಯರ್ ಜೆಸಿಂತಾ, ಮತ್ತಿತರರು ಉಪಸ್ಥಿತರಿದ್ದರು.
ಅಭಿನಂದನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಗರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್ ಪ್ರಾಸ್ತಾವಿಕ ಮಾತನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು