5:14 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ: ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ

21/07/2024, 19:43

ಮಂಗಳೂರು(reporterkarnataka.com): ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು.
ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21 ರಂದು ಭಾನುವಾರ ಗುರು ಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಆಶೀರ್ವಚನವಿತ್ತು ಇಂದು ಶಾಂತಿ, ಸಮಾಧಾನ ಮತ್ತು ತೃಪ್ತಿಯ ಬದುಕನ್ನು ಬಾಳಬೇಕಾದ ಅಗತ್ಯವಿದೆ. ಇಂದಿನ ಬದುಕಿನ ಅವಶ್ಯಕತೆಯನ್ನು ಮನಗಂಡು ಗುರು ಪೂರ್ಣಿಮೆಯನ್ನು ರೂಪಿಸಿದಂತಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಶ್ರೀಗುರು ಪಾದುಕಾ ಪೂಜೆ, ದೇವೀಪೂಜೆ, ಸರ್ವೈಶ್ವರ್ಯ ಪೂಜೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ, ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ವಿತರಣೆ ಜರುಗಿತು.
ಗುರು ಪೂರ್ಣಿಮಾ ದಿನದ ಶುಭ ಸಂದರ್ಭದಲ್ಲಿ ಭಾಗವಹಿಸಿದ ಭಕ್ತರ ಹಾಗೂ ಸಮಾಜದ ಸ್ವಾಸ್ಥ್ಯ ಸಂರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಪೂರ್ವಾಹ್ನ ಬೋಳೂರಿನ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ ಮತ್ತು ಮಹಾ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಅಮೀನ್ ಮತ್ತು ಪದಾಧಿಕಾರಿಗಳು, ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಪೂರ್ವಾಧ್ಯಕ್ಷ ಡಾ. ಜೀವರಾಜ್ ಸೊರಕೆ, ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ, ಉಪಾಧ್ಯಕ್ಷ ಸುರೇಶ್ ಅಮೀನ್, ಕಾರ್ಯದರ್ಶಿ ಡಾ. ಕೆ. ಅಶೋಕ್ ಶೆಣೈ, ಯುವಘಟಕ ಆಯುಧ್ ನ ಪದಾಧಿಕಾರಿಗಳು, ಉಡುಪಿ – ಕುಂದಾಪುರ ಘಟಕಗಳ ಪದಾಧಿಕಾರಿಗಳು, ಸದಸ್ಯರು, ಅಮ್ಮನ ಭಕ್ತರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು