3:13 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ನಂಜನಗೂಡು ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂತರಾಜ್ ಆಯ್ಕೆ

22/07/2024, 20:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹೆಗ್ಗಡ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾಂತರಾಜ್ ಆಯ್ಕೆಯಾಗಿದ್ದಾರೆ
ಅಧ್ಯಕ್ಷ ಸ್ಥಾನಕ್ಕೆ ಸದಸ್ಯರುಗಳ ಒಪ್ಪಂದದಂತೆ ಹಿಂದಿನ ಅಧ್ಯಕ್ಷರಾಗಿದ್ದ ಮನೋಜ್ ಅವರು ನೀಡಿದ್ದ ರಾಜೀನಾಮೆ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಒಟ್ಟು 19 ಮಂದಿ ಸದಸ್ಯರಿರುವ ಗ್ರಾಮ ಪಂಚಾಯಿತಿ ಗೆ ಇಂದು ನಡೆದ ಚುನಾವಣೆಯಲ್ಲಿ 18 ಸದಸ್ಯರು ಹಾಜರಿದ್ದು ಒಬ್ಬ ಸದಸ್ಯರು ಗೈರು ಹಾಜರಾಗಿರುತ್ತಾರೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕಾಂತರಾಜ್ ಹಾಗು ಕಾಂಗ್ರೆಸ್ ಬೆಂಬಲಿತ ಬಸವರಾಜ್ ನಾಮಪತ್ರ ಸಲ್ಲಿಸಿರುತ್ತಾರೆ. ಯಾರೊಬ್ಬರು ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆ ಚುನಾವಣೆ ನಡೆದಿದೆ.
ನಂತರ ನಡೆದ ಚುನಾವಣೆಯಲ್ಲಿ ಕಾಂತರಾಜ್ ಅವರಿಗೆ 10 ಮತಗಳು ಬಸವರಾಜ್ ಅವರಿಗೆ 8 ಮತಗಳು ಬಂದ ಪರಿಣಾಮ 10 ಮತಗಳನ್ನು ಪಡೆದು ಕಾಂತರಾಜ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಾದ ಚಂದ್ರು ಘೋಷಣೆ ಮಾಡಿದರು.


ನೂತನ ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ಮುಖಂಡರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಿಗೆ ಬಿಜೆಪಿ ಕಾರ್ಯಕರ್ತ ಮುಖಂಡರು ಸಿಹಿ ತಿನಿಸಿ ಮಾಲಾರ್ಪಣೆ ಮಾಡುವ ಮೂಲಕ ಅಭಿನಂದಿಸಿದರು.
ಬಳಿಕ ನೂತನ ಅಧ್ಯಕ್ಷ ಕಾಂತರಾಜ್ ಮತ್ತು ರಾಜ್ಯ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕರಂಗನಾಯಕ ಮಾತನಾಡಿ ಅಧ್ಯಕ್ಷರ ಆಯ್ಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದಾಗ ಎಲ್ಲಾ ಸದಸ್ಯರಿಗೆ ಕೃತಜ್ಞತೆ ತಿಳಿಸಿ ಎಲ್ಲರ ಸಹಕಾರ ಬೆಂಬಲದೊಂದಿಗೆ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿ ಚುನಾವಣೆಯ ಬಗ್ಗೆ ವಿವರಿಸಿದರು.
ಸಹಾಯಕ ಚುನಾವಣಾಧಿಕಾರಿ ಸತೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಸೇರಿದಂತೆ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು