2:25 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ

24/08/2021, 17:38

ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ.

ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ರಾಣೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ 4 ಪ್ರಕರಣ ದಾಖಲಿಸಲಾಗಿದೆ. ಪುಣೆ ಹಾಗೂ ನಾಸಿಕ್ ನಲ್ಲಿ ತಲಾ ಒಂದು ಪ್ರಕರಣ ಹಾಗೂ ರಾಯಗಢ ಜಿಲ್ಲೆಯಲ್ಲಿ ಎರಡು ಪ್ರಕರಣಗಳು

ದಾಖಲಾಗಿದೆ.

ನಾರಾಯಣ ರಾಣೆ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿ, ರಾಣೆ ಅವರು ಮುಖ್ಯಮಂತ್ರಿ ಬಗ್ಗೆ ಮಾತನಾಡುವಾಗ ಸಂಯಮ ತೋರಿಸಬೇಕಿತ್ತು ಎಂದಿದ್ದಾರೆ.

ಈ ನಡುವೆ ರಾಣೆ ಅವರು ತನ್ನ ವಿರುದ್ಧ ಎಫ್ ಐಆರ್ ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನ ಅಥವಾ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ನೀಡುವಂತೆ ಮಧ್ಯಂತರ ಆದೇಶ ಕೋರಿದ್ದಾರೆ.

ನಾರಾಯಣ ರಾಣೆ ಈ ಹಿಂದೆ ಶಿವಸೇನೆಯಲ್ಲಿದ್ದು, ಮುಖ್ಯಮಂತ್ರಿಯಾಗಿದ್ದರು. ನಂತರ ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿದ್ದರು. ನಂತರ ಬಿಜೆಪಿ ಸೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು