3:49 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶಿರಾಡಿ ಘಾಟ್​ನಲ್ಲಿ ಮತ್ತೆ ಭೂಕುಸಿತ: ಎತ್ತಿನಹಳ್ಳದ ಸಮೀಪ ಗುಡ್ಡ ಕುಸಿದು ಸಂಚಾರ ಸ್ಥಗಿತ; ಮೈಲುಗಟ್ಟಲೆ ಟ್ರಾಫಿಕ್ ಜಾಮ್

27/07/2024, 16:15

ಹಾಸನ(reporterkarnataka.com): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಗಾಳಿಮಳೆ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಶಿರಾಡಿ ಘಾಟಿಯ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಕಿಲೋಮೀಟರ್​ಗಟ್ಟಲೆ ವಾಹನಗಳು ಹೆದ್ದಾರಿಯಲ್ಲಿ ಸಿಲುಕಿಕೊಂಡಿವೆ. ಗುಡ್ಡೆ ಕುಸಿತಕ್ಕೆ ಆಮೆಗತಿಯ
ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜೂನ್ 18 ರಂದು ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್​ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದರು. ಆದರೆ ಇಂದು ಮತ್ತೊಮ್ಮೆ ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಸ್ತೆಯಿಂದ
ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು