1:04 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಸಿಎಂ ತವರು ಕ್ಷೇತ್ರದಲ್ಲಿ ಸಿಡಿದೆದ್ದ ದಲಿತ ಸಂಘಟನೆಗಳು: ಹಣ ದುರ್ಬಳಕೆ ಖಂಡಿಸಿ ನಂಜನಗೂಡಿನಲ್ಲಿ ಪ್ರತಿಭಟನೆ

27/07/2024, 16:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಹಣ ದುರ್ಬಳಕೆ ಖಂಡಿಸಿ ನಂಜನಗೂಡಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಮಂಜು ಶಂಕರಪುರ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ಅಭಿವೃದ್ಧಿಯ ಹೆಸರಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ.ಎಸ್.ಪಿ ಮತ್ತು ಟಿಎಸ್ ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವುದು ಅವರ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ‌. ಈ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ದಲಿತ ರಾಜಕಾರಣಿಗಳು ಗುಲಾಮರಂತೆ ವರ್ತಿಸುತ್ತಿದ್ದಾರೆ ಇವರ ಕಾರ್ಯವೈಕರಿ ಬದಲಾಗಬೇಕು. ಮೀಸಲು ಹಣವನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು