1:29 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

27/07/2024, 16:29

ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ ಜಯಪ್ರಕಾಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಸಿಸ್ಟಮ್ಸನ ಮಾಲಕರಾದ ರಾಜೇಶ್ ಅಧಿಕಾರ ಸ್ವೀಕರಿಸಿದರು.
ಕಾರ‍್ಯಕಾರಿ ಸಮಿತಿಯ ಸದಸ್ಯರಾಗಿ ಆರ್ಯ ಎಂಟರ್‌ಪ್ರೈಸಸ್‌ನ ನಿರ್ದೆಶಕರಾದ ಮುರಳಿ ಎಚ್., ಸಾಫ್ಟ್ ಲಿಂಕ್ ಮಾಲಕರಾದ ಗಣೇಶ್, ಐ ಕೇರ್ ಕಂಪ್ಯೂಟರ್ಸ್ ಮಾಲಕರಾದ ಲೋಕೇಶ್, ಇಲೆಕ್ಟೊçಟೆಕ್ ಸಿಸ್ಟಮ್ಸ್ ಪಾಲುದಾರರಾದ ಭರತ್ ಶೆಟ್ಟಿ, ಎ.ಎನ್. ಎಂಟರ್‌ಪ್ರೈಸಸ್‌ನ ಪಾಲುದಾರರಾದ ನಿರಂಜನ್ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿ ತಮ್ಮ ನಿರ್ಗಮನ ಭಾಷಣದಲ್ಲಿ ಸಂಸ್ಥೆಯ ಕಳೆದ ಅವಧಿಯ ಕರ‍್ಯಕ್ರಮಗಳ ವಿವರಗಳನ್ನು ನೀಡಿದರು.
ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಜಗದೀಶ್ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ಕಾರ‍್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು ಮತ್ತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಆಯ್ಕೆಯಾದ ಮುರಳಿ ಎಚ್. ಅವರನ್ನು ಗೌರವಿಸಲಾಯಿತು.
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ (ಎಮ್‌ಐಟಿಡಿಎ) ಪೂರ್ವಧ್ಯಕ್ಷರಾದ ಗೋಪಿನಾಥ್, ಕೇತನ್ ಚಂದ್ರಾನ, ಸಾಯಿ ರಾವ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಶಂಕರ್ ನಾರಾಯಣ ಪ್ರಾರ್ಥನೆ ನೆರವೇರಿಸಿದರು, ಜಗದೀಶ್ ಸ್ವಾಗತಿಸಿದರು. ರವಿ ಭಟ್ ವಂದನಾರ್ಪಣೆ ಸಲ್ಲಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು