6:02 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ

28/07/2024, 17:36

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ ‘ಪಿಂಗಾರ’ ವಾರ ಪತ್ರಿಕೆಯ ಸಹಯೋಗದಲ್ಲಿ ‘ಚಾರೊಳಿ’ 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮಾತನಾಡಿ ‘ಚಾರೊಳಿ’ ಎಂದರೆ ನಾಲ್ಕು ಸಾಲುಗಳ ಸಾಹಿತ್ಯ. ಈ ನಾಲ್ಕು ಸಾಲುಗಳ ಸಾಹಿತ್ಯದಲ್ಲಿ ಎಲ್ಲಾ ವಿಷಯಗಳನ್ನು ಮನ ತಟ್ಟುವಂತೆ ಮಾಡುವ ಸಾಹಿತ್ಯ ಜನರ ಮನೆ ಮಾತಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್‌ ಕ್ಯಾಸ್ಟಲಿನೊ ಅವರು ಶುಭ ಹಾರೈಸಿದರು. ಅತಿಥಿಗಳಾಗಿ ರಾಹುಲ್‌ ಜಾಹೀರಾತು ಸಂಸ್ಥೆಯ ಮಾಲಕ ಟೈಟಸ್‌ ನೊರೊನ್ಹಾ, ನವೀನ್ ನಾಯಕ್‌, ಫೋರ್‌ ವಿಂಡ್ಸ್ ಜಾಹೀರಾತು ಸಂಸ್ಥೆಯ ನಿರ್ದೇಶಕ ಎಲಿಯಾಸ್‌ ಫೆರ್ನಾಂಡಿಸ್‌ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊಂಕಣಿ ಹಾಗೂ ಇತರ ಭಾಷೆಗಳಲ್ಲಿ ಹಲವಾರು ಸಾಹಿತ್ಯ ಕೃತಿ ರಚಿಸಿದ ಕೊಂಕಣಿ ಕವಿ ರಿಚಾರ್ಡ್‌ ಲಸ್ರಾದೊ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇರಳ, ಗೋವಾ, ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಹಲವು ಮಂದಿ ಕವಿಗಳು ಹಾಗೂ ಚಾರೊಳಿಯಲ್ಲಿ ನಿಪುಣರಾದ ಸಾಹಿತಿಗಳು ಭಾಗವಹಿಸಿದ್ದರು.
ಅಖಿಲ ಭಾರತೀಯ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಪಿಂಗಾರ ಪತ್ರಿಕೆಯ ಸಂಪಾದಕ ರೈಮಂಡ್ ಡಿ’ಕುನ್ಹಾ ಸ್ವಾಗತಿಸಿದರು. ರಿಯಾನಾ ಡಿ’ಕಿನ್ಹಾ ಮತ್ತು ಅರವಿಂದ ಶಾನುಬೋಗ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು