ಇತ್ತೀಚಿನ ಸುದ್ದಿ
ಮೂಗಿನಲ್ಲಿ ರಕ್ತಸ್ರಾವ: ಕೇಂದ್ರ ಸಚಿವ, ಜೆಡಿಎಸ್ ನಾಯಕ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
28/07/2024, 19:53
ಬೆಂಗಳೂರು(reporterkarnataka.com): ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮ ಜತೆ ಮಾತನಾಡುತ್ತಿದ್ದಾಗ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಮೂಗಿನಿಂದ ತೀವ್ರ ರಕ್ತಸ್ರಾವದ ವೀಡಿಯೊವನ್ನು ಸುದ್ದಿ ಸಂಸ್ಥೆಯೊಂದು ಎಕ್ಸ್ ( ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದೆ.