3:00 PM Wednesday30 - October 2024
ಬ್ರೇಕಿಂಗ್ ನ್ಯೂಸ್
ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು… ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಇತ್ತೀಚಿನ ಸುದ್ದಿ

ಪ್ರಸಕ್ತ ಮುಂಗಾರು: ರಾಜ್ಯದಲ್ಲಿ ಭಾರೀ ಮಳೆಗೆ ಒಟ್ಟು 44 ಮಂದಿ ಸಾವು; 600 ಮನೆಗಳು ಸಂಪೂರ್ಣ ನಾಶ; 2632 ಹೆಕ್ಟೇರ್ ಬೆಳೆ ಹಾನಿ

30/07/2024, 20:04

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಮಳೆ ಸಂಬಂಧಿಸಿದ ಅನಾಹುತದಲ್ಲಿ ಒಟ್ಟು 44 ಮಂದಿ ಪ್ರಾಣ ಕಳೆದುಕೊಂಡಿದ್ದು, 2632 ಹೆಕ್ಟೇರ್ ಬೆಳೆ ಹಾನಿಯಾಗಿದೆ.


ನೆರೆ, ಭೂಕುಸಿತ, ಮನೆ ನಾಶದಿಂದ ರಾಜ್ಯದ ವಿವಿಧೆಡೆಗಳಲ್ಲಿ ಈ ಸಾವು ಸಂಭವಿಸಿದೆ. ಕರಾವಳಿ,ಮಲೆನಾಡು ಹಾಗೂ ಮುಂಬೈ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ 371 ಎಂಎಂ ಮಳೆಯಾಗಿದೆ. 225 ಎಂಎಂ ಸಾಮಾನ್ಯ ಮಳೆಯಾಗಿದ್ದು, ಈ ಬಾರಿ ಅಧಿಕ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮಳೆಗೆ ಸಂಬಂಧಿಸಿದಂತೆ ಒಟ್ಟು 44 ಮಂದಿ ಸಾವನ್ನಪ್ಪಿದ್ದಾರೆ. ಭೂಕುಸಿತ, ಮನೆ ನಾಶದಿಂದ ಈ ಸಾವು ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಮಹಾ ದುರಂತ ಭೂಕುಸಿತ ಕೂಡ ಇದರಲ್ಲಿ ಸೇರಿದೆ.
ರಾಜ್ಯದಲ್ಲಿ ಒಟ್ಟು 600 ಮನೆಗಳು ಸಂಪೂರ್ಣ ನಾಶವಾಗಿದೆ. 4200 ಮನೆಗಳು ಭಾಗಶಃ ಹಾನಿಗೀಡಾಗಿವೆ. ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೇ 543 ಮನೆಗಳು ಸೇರಿವೆ. ನಂತರ ಉಡುಪಿ, ಹಾಸನ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳು ಹಾನಿಗೀಡಾಗಿವೆ. ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಸಾಕಷ್ಟು ಬೆಳೆ ಹಾನಿಗೀಡಾಗಿದೆ. ಕೃಷ್ಣಾ, ಘಟಪ್ರಭಾ ಹಾಗೂ ಭೀಮಾ ನದಿ ತೀರದ ಗ್ರಾಮಗಳ ಕೃಷಿಭೂಮಿಗೆ ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು