ಇತ್ತೀಚಿನ ಸುದ್ದಿ
ಅವ್ಯಾಹತ ಭಾರೀ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜಿಗೆ ರಜೆ
30/07/2024, 21:47
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.
ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಗೂ ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡ ಕಾರಣ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.