4:35 AM Tuesday29 - October 2024
ಬ್ರೇಕಿಂಗ್ ನ್ಯೂಸ್
ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು… ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಇತ್ತೀಚಿನ ಸುದ್ದಿ

ಕಲಿ ಯೋಗೀಶ್ ಸಹಚರರಿಬ್ಬರ ಬಂಧನ: ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದು, ಮಾದಕ ವಸ್ತುಗಳು ವಶ

30/07/2024, 21:50

ಮಂಗಳೂರು(reporterkarnataka.com): ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಆರೋಪಿ ಕಲಿ ಯೋಗೀಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳನ್ನು, ಮಾದಕ ವಸ್ತುಗಳಾದ ಎಂಡಿಎಂಎ ನ್ನು ಹೊಂದಿಕೊಂಡು ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸಲು ಸಂಚು ರೂಪಿಸಿ ತಿರುಗಾಡಿಕೊಂಡಿರುವ ಕುರಿತು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಫಳ್ನೀರ್ ಬಳಿಯಿಂದ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ
ಕಲಿ ಯೋಗೀಶನ ಸಹಚರರಾದ ಪೈವಳಿಕೆ ಗ್ರಾಮದ ಮೊಹಮ್ಮದ್ ಹನೀಫ್ ಅಲಿ ಮುನ್ನಾ(40), ಮುಡಿಪು ಸಮೀಪದ ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ (36) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಪಿಸ್ತೂಲ್-1, ರಿವಾಲ್ವರ್-1, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತುವಾದ ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ 10 ಲಕ್ಷ ಆಗಬಹುದು.
ಆರೋಪಿಗಳಿಬ್ಬರು ವಿದೇಶದಲ್ಲಿ ತಲೆಮರೆಸಿಕೊಂಡಿರುವ
ಕಲಿ ಯೋಗೀಶನ ಸಹಚರರಾಗಿದ್ದು, ಆರೋಪಿಗಳ ಪೈಕಿ ಮೊಹಮ್ಮದ್ ಹನೀಫ್ ಅಲಿಯಾಸ್ ಅಲಿ ಮುನ್ನಾ ಎಂಬಾತನು ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜ್ಯುವೆಲ್ಲರಿ ಶೂಟೌಟ್ ಪ್ರಕರಣ, ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜ್ಯಾರಿಯಲ್ಲಿರುತ್ತದೆ.
ಇನ್ನೋರ್ವ ಆರೋಪಿ ಮೊಹಮ್ಮದ್ ರಫೀಕ್ ಅಲಿಯಾಸ್ ಮುಡಿಪು ರಫೀಕ್ ಎಂಬಾತನ ವಿರುದ್ಧ ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ದೇವಸ್ಥಾನ ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಡಿ ಕುಲಕರ್ಣಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಸಿಸಿಬಿ ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಹರೀಶ್ ಪದವಿನಂಗಡಿ, ಎಎಸ್ಐ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು