ಇತ್ತೀಚಿನ ಸುದ್ದಿ
ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು
30/07/2024, 22:15
ಮಂಗಳೂರು(reporterkarnataka.com):ಎನ್‌ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಎಂದು ಗುರುತಿಸಲಾಗಿದೆ.
ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು ಅವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.