4:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಯನಾಡು ಮಳೆ ಎಫೆಕ್ಟ್: ಅಪಾಯದ ಅಂಚಿನಲ್ಲಿ ನಂಜನಗೂಡು: ಮತ್ತೆ ಜಲ ದಿಗ್ಬಂಧನ ಎದುರಿಸುತ್ತಿರುವ ಶ್ರೀಕಂಠ

31/07/2024, 15:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಬಿನಿ ನದಿ ಪಾತ್ರವಾದ ಕೇರಳ ವಯನಾಡಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಪಟ್ಟಣದ ಮಲ್ಲನ ಮೂಲೆ ಮಠದ ಬಳಿ ಮೈಸೂರು ನಂಜನಗೂಡು ಹೆದ್ದಾರಿ ರಸ್ತೆಯು ಮುಳುಗಡೆಯಾಗಿರುವುದರಿಂದ ಸಂಚಾರ ಬಂದ್ ಮಾಡಿ ಬದಲಿ ರಸ್ತೆ ಸಂಚಾರ ಕಲ್ಪಿಸಲಾಗಿದೆ. ಇದರಿಂದಾಗಿ ಸಂಚಾರ ಹಸ್ತವ್ಯಸ್ತಗೊಂಡಿದೆ.
ಕಪಿಲಾ ನದಿ ಪ್ರವಾಹದಿಂದಾಗಿ ಮಲ್ಲನಮೂಲೆ ಮಠವೂ ಸೇರಿದಂತೆ ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪ ಸ್ವಾಮಿ, ದತ್ತಾತ್ರೇಯ ಸ್ವಾಮಿ, ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತಗೊಂಡಿವೆ.


ಅಲ್ಲದೆ ಐತಿಹಾಸಿಕ 16 ಕಾಲು ಮಂಟಪ ಮತ್ತು ಹಳೆಯ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ.
ಇನ್ನು ತಗ್ಗು ಪ್ರದೇಶದ ಸಾವಿರಾರು ಎಕರೆ ಜಮೀನುಗಳು ಸ್ಮಶಾನಗಳು ಕೂಡ ನದಿ ಪ್ರವಾಹದಿಂದ ಮುಳುಗಡೆಯಾಗಿವೆ. ದೇವಾಲಯದ ಸುತ್ತಮುತ್ತ ಮುಡಿಕಟ್ಟೆ, ಸೋಪಾನಕಟ್ಟೆ, ದಾಸೋಹ ಭವನ ಸೇರಿದಂತೆ ದೇವಸ್ಥಾನದ ಪಾರ್ಕಿಂಗ್ ಮತ್ತು ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀಕಂಠೇಶ್ವರ ಮಂಗಳಮಂಟಪ ಕಲ್ಯಾಣ ಮಂಟಪ ಮತ್ತು ಹಳ್ಳದ ಕೇರಿಯಲ್ಲಿ ಕೆಲವು ವಾಸದ ಮನೆಗಳು ಕೂಡ ಜಲಾವೃತಗೊಂಡಿವೆ.
ವಯನಾಡುವಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ನಂಜನಗೂಡು ಪಟ್ಟಣಕ್ಕೂ ನೀರು ನುಗ್ಗುವ ಭೀತಿ ಎದುರಾಗಲಿದೆ. ಪ್ರವಾಹದ ಮುನ್ನೆಚ್ಚರಿಕೆಯಿಂದ ನಂಜನಗೂಡು ತಾಲೂಕು ಆಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಲ್ಲ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು