1:27 PM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ

ಇತ್ತೀಚಿನ ಸುದ್ದಿ

ಮಾಜಿ ಸಂಸದ ದಿವಂಗತ ದೃವನಾರಾಯಣ್ ಹಟ್ಟುಹಬ್ಬ: ಬೃಹತ್ ಉದ್ಯೋಗ ಮೇಳ; 100ಕ್ಕೂ ಹೆಚ್ಚು ಕಂಪನಿಗಳು ಭಾಗಿ

31/07/2024, 18:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ದಿವಂಗತ ದೃವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಿತು.
ಮಾಜಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.‌
ಬಳಿಕ ಅವರು ಮಾತನಾಡಿ ದೃವನಾರಾಯಣ್ ಅವರು ಮಾಡಿಕೊಂಡು ಬರುತ್ತಿದ್ದ ಜನಪರ ಕೆಲಸಗಳನ್ನು ಅವರ ಪುತ್ರರಾದ ಶಾಸಕ ದರ್ಶನ್ ಧ್ರುವನಾರಾಯಣ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅವರ ಕನಸನ್ನು ಈಡೇರಿಸುವ ಸಲುವಾಗಿ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಇಂತಹ ಕೆಲಸ ನಿಜಕ್ಕೂ ಮೆಚ್ಚುವಂತಹದ್ದೆ ಎಂದು ಕಾರ್ಯಕ್ರಮ ಹಾಗೂ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ಭಾಗದ ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನಮ್ಮ ತಂದೆಯವರು ಶಾಸಕರಾಗಿ, ಸಂಸದರಾಗಿ ಈ ಭಾಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅದೇ ರೀತಿ ನಾನು ಕೂಡ ಅವರ ದಾರಿಯಲ್ಲಿಯೇ ಸಾಗಿ ಉತ್ತಮ ಕೆಲಸ ಮಾಡುತ್ತೇನೆ ನಿಮ್ಮ ಸಹಕಾರ ಬೆಂಬಲ ಯಾವಾಗಲೂ ಹೀಗೆ ಇರಲಿ ಎಂದರು.
ನೂರಕ್ಕೂ ಹೆಚ್ಚು ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉದ್ಯೋಗ ಹರಸಿ ಬಂದ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದವು.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಸೇರಿದಂತೆ, ಸುಮಾರು 2,000 ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಕೆಲಸಕ್ಕಾಗಿ ನೊಂದಣಿ ಮಾಡಿಕೊಂಡಿದ್ದರು.
ಮೇಳದಲ್ಲಿ ಹಲವು ಕಂಪನಿಗಳಿಂದ 500ಕ್ಕೂ ಹೆಚ್ಚು ಅಭ್ಯರ್ಥಿಗಳು ನೇರ ಉದ್ಯೋಗ ಪಡೆದುಕೊಂಡಿರುತ್ತಾರೆ.
ಇದರಲ್ಲಿ ವಿಶೇಷವಾಗಿ ನಾಲ್ಕು ಮಂದಿ ವಿಕಲಚೇತನರಿಗೂ ಸಹ ಉದ್ಯೋಗ ಸಿಕ್ಕಿ ಖಾತರಿ ಪತ್ರವನ್ನು ಸಹ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಧೀರನ್ ದ್ರುವ ನಾರಾಯಣ್, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯ್ ಕುಮಾರ್ ನಂಜನಗೂಡು ಉಸ್ತುವಾರಿ ಶ್ರೀಕಂಠ, ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು