10:04 PM Saturday23 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್…

ಇತ್ತೀಚಿನ ಸುದ್ದಿ

ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಭೇಟಿ: ಶಾಶ್ವತ ಪರಿಹಾರಕ್ಕೆ ಶಾಸಕರ ಜೊತೆ ಚರ್ಚಿಸಿದ ಕೃಷ್ಣ ಬೈರೇಗೌಡ

02/08/2024, 19:23

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com

ಕಪಿಲಾ ನದಿಯ ಪ್ರವಾಹಕ್ಕೆ
ನಂಜನಗೂಡಿನ ತಗ್ಗು ಪ್ರದೇಶದ ಜನರು ತತ್ತರಿಸಿ ಹೋಗಿದ್ದು, ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರತಿ ವರ್ಷದ ಪ್ರವಾಹದ ಸಂದರ್ಭದಲ್ಲಿ ವಾಸದ ಮನೆಗಳನ್ನು ತೊರೆದು ಜನ ಜಾನುವಾರುಗಳ ಜೊತೆ ಕಾಳಜಿ ಕೇಂದ್ರದ ಮೊರೆ ಹೋಗಬೇಕಾಗುತ್ತದೆ. ಇದರ ಶಾಶ್ವತ ಪರಿಹಾರಕ್ಕಾಗಿ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದ ಹಿಂಬದಿಯ ತಗ್ಗು ಪ್ರದೇಶಗಳಿಗೆ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ದರ್ಶನ್ ಅವರ ಜೊತೆಗೂಡಿ ವೀಕ್ಷಣೆ ಮಾಡಿದರು. ತೋಪಿನ ಬೀದಿ, ಕಪಿಲ ನದಿಯ ಸ್ನಾನಘಟ್ಟಕ್ಕೆ ತೆರಳಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿರಾಶ್ರಿತರಿಗೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಕಾಳಜಿ ಕೇಂದ್ರಗಳನ್ನು ತೆರೆದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮುಂದೆ ಯಾವುದೇ ಹಾನಿಯಾಗದಂತೆ ಶಾಶ್ವತ ಪರಿಹಾರ ನೀಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಎಲ್ಲಾ ರೀತಿಯ ಸೌಲಭ್ಯಗಳನ್ನು ತಾಲೂಕು ಮತ್ತು ಜಿಲ್ಲಾ ಆಡಳಿತದಿಂದ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಈ ಕುರಿತು ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ಮುಂದೆ ಪದೇ ಪದೇ ಈ ರೀತಿ ಆಗದೇ ಇರುವುದಕ್ಕೆ ಏನಾದರೂ ಶಾಶ್ವತ ಪರಿಹಾರಕ್ಕಾಗಿ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಹ ಪೀಡಿತ ಪ್ರದೇಶಗಳ ಭೇಟಿಯ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು