7:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿ ಸಾಧ್ಯ: ವಿಜ್ಞಾನಿ ಡಾ ಆದರ್ಶ ಗೌಡ

02/08/2024, 20:22

ಸಂತೋಷ್ ಬೆಳಗಾವಿ

info.reporterkarnataka@gmail.com

ಸ್ವಾರ್ಥ ಭಾವನೆ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಕಾರ್ಯ ನಿರ್ವಹಿಸುತ್ತಿರುವರಿಗೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಹಣವನ್ನು ವಿನಾಕಾರಣ ಖರ್ಚು ಮಾಡದೆ ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತದೆ ಎಂದು ಮೀನುಗಾರಿಕಾ ವಿಜ್ಞಾನಿ ಡಾ ಆದರ್ಶ ಗೌಡ ಹೇಳಿದರು.
ಅವರು ಹಳ್ಳೂರ ಗ್ರಾಮದ ಶಿವಶಂಕರ ನಗರದ ಬಾಗೋಡಿ ತೋಟದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಣ ಕೂಡಿಸುವ ಸರಿಯಾದ ಮಾರ್ಗ ಹುಡುಕಿ ಸ್ವಾರ್ಥ ಭಾವನೆ ಬಿಟ್ಟು ಇನ್ನೊಬ್ಬರಿಗೆ ಸಹಾಯ, ಸಹಕಾರ ಮಾಡುವ ಮನೋಭಾವ ಬೆಳೆಸಿಕೊಂಡು ಹೋದರೆ ಒಳ್ಳೆಯ ಅವಕಾಶ ಬರುತ್ತವೆ. ಬಡತನವೇ ಕಷ್ಟ ಅಂತ ಹೇಳಿ ಕುಳಿತರೆ ಪ್ರಯೋಜನವಿಲ್ಲ. ಭೂಮಿಯಲ್ಲಿ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದು ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದೆಂದು ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಕಷ್ಟು ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತಿದೆ. ಹಣ ಉಳಿತಾಯ ಮಾಡಲು ಸಾವಿರಾರು ದಾರಿ ಇದೆ. ಮಾಡುವ ಮನಸ್ಸು ಇದ್ದರೆ ಬಡತನ ಮೀರಿ ಯೋಚನೆ ಮಾಡಿದರೆ ಬಡತನ ನಿರ್ಮೂಲನೆ ಆಗುವುದು. ಹೈನುಗಾರಿಕೆ ಸಾಕಷ್ಟು ಜನ ಹೆಚ್ಚು ಲಾಭವನ್ನು ಪಡೆಯಬಹುದು. ಬೇರೆ ಬೇರೆ ರೀತಿಯ ಕೆಲಸ ಕಾರ್ಯ ಮಾಡಬಹುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು