4:07 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ

25/08/2021, 09:36

ಮಂಗಳೂರು(reporterkarnataka.com):

ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ.

ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್‌ಕುಮಾರ್ ಕಟೀಲ್‌ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಮಾಡಿದ್ದಾರೆ.

ಹೊಸ ಪ್ರಸ್ತಾವದ ಪ್ರಕಾರ ರೈಲು ಮಂಗಳೂರು ಜಂಕ್ಷನ್‌ ನಿಲ್ದಾಣಕ್ಕೆ ಮಧ್ಯಾಹ್ನ 12.40ಕ್ಕೆ ಬರಲಿದ್ದು, ಸಂಜೆ 4.30ಕ್ಕೆ ಇಲ್ಲಿಂದ ಹೊರಡಲಿದೆ. ಈ ವೇಳಾಪಟ್ಟಿಯಿಂದ ಕರಾವಳಿಯ ಜನರಿಗೆ ತೊಂದರೆ ಆಗಲಿದೆ. ಈಗಾಗಲೇ ರೈಲ್ವೆ ಬಳಕೆದಾರರ ಸಂಘ, ಸಾರ್ವಜನಿಕರಿಗೆ ನೈರುತ್ಯ ರೈಲ್ವೆಗೆ ಮನವಿ ಸಲ್ಲಿಸಲಾಗಿದ್ದು, ವೇಳಾಪಟ್ಟಿ ಪರಿಷ್ಕರಿಸುವಂತೆ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು–ವಿಜಯಪುರ ರೈಲಿನ ವೇಳಾಪಟ್ಟಿ ಪರಿಷ್ಕರಿಸಬೇಕು. ಈ ರೈಲು ಬೆಳಿಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್‌ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡುವಂತೆ ಮಾಡಬೇಕು. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದ್ದಾರೆ.

ಈ ವೇಳಾಪಟ್ಟಿಯಲ್ಲಿ ರೈಲು ನಿಲುಗಡೆಗೆ ಅನಾನುಕೂಲ ಆದಲ್ಲಿ, ರೈಲನ್ನು ಬಂದರಿನ ಗೂಡ್‌ಶೆಡ್‌ ಯಾರ್ಡ್‌ ಅಥವಾ ಉಳ್ಳಾಲ ನಿಲ್ದಾಣ ಗಳಲ್ಲಿ ನಿಲುಗಡೆ ಮಾಡಲು ಅವಕಾಶ ವಿದೆ. ಸಮಯಕ್ಕೆ ಸರಿಯಾಗಿ ಹೊರ ಡುವ ನಿಲ್ದಾಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು