ಇತ್ತೀಚಿನ ಸುದ್ದಿ
ನಂಜನಗೂಡು: ಕಾರ್ತಿಕ ಮಾಸದ ಕಡೆ ಶುಕ್ರವಾರ ಅಂಗವಾಗಿ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ದಂಡು
02/08/2024, 23:06
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಕಡೆ ಕಾರ್ತಿಕ ಮಾಸದ ಅಂಗವಾಗಿ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಕಾರ್ತಿಕ ಮಾಸದ ಕಡೆ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯನ್ನು ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಸಾವಿರಾರು ಭಕ್ತರು ಇಂದು ಬೆಳಗ್ಗಿನಿಂದಲೇ ಸರತಿ ಸಾಲಿನಲ್ಲಿ ಬಂದು ಶ್ರೀ ಅಮ್ಮನವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.
ವಿಶೇಷವಾಗಿ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತಾಯಿಗೆ ನಿಂಬೆಹಣ್ಣು ಆರತಿ ಮಾಡಲು ದೇವಾಲಯದ ಒಳ ಹಾಗೂ ಹೊರ ಆವರಣಗಳಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದರು.
ದೇವಾಲಯದ ಹೊರ ಆವರಣದಲ್ಲಿ ಭಕ್ತರು ನಿಂಬೆ ಹಣ್ಣು ಆರತಿ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ನಂಜನಗೂಡು ಪಟ್ಟಣವು ಸೇರಿದಂತೆ ವಿವಿದೆಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು.
ಇದೇ ಸಂದರ್ಭ ಬಂದ ಎಲ್ಲಾ ಭಕ್ತರಿಗೆ ಕರ್ನಾಟಕ ರಕ್ಷಣಾ ಪಡೆ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ವೈದ್ಯನಾಥ ದೀಕ್ಷಿತ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.