11:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು

03/08/2024, 16:16

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com

ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ್ರದಾನ‌ ಮಾಡಿದರು.
ಸಮಾರಂಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲ ಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ವಿವಿಯಲ್ಲಿ ನಿರ್ಮಾಣ ಮಾಡುತ್ತಿರುವ ಬಯಲ ರಂಗ ಮಂದಿರಕ್ಕೆ ಬಳ್ಳಾರಿ ರಾಘವರ ಹೆಸರು ಇಡಲು ಸರ್ಕಾರಕ್ಕೆ ಶಿಫಾರಸು ಮಾಡಲಿದೆಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಕಾರಂತ ಅವರು, ಬಹು ಭಾಷೆ ಮತ್ತು ದೇಶ ವಿದೇಶಗಳಲ್ಲಿ ನಟಿಸಿದ ರಾಘವರ ಪ್ರಶಸ್ತಿ ದೊರೆತಿದ್ದು, ಅವಿಸ್ಮರಣೀಯವಾದುದು. ನಾಟಕ ನೋಡಲು ಬರುವ ಪ್ರೇಕ್ಷಕರು ಇದ್ದಾರೆ.
ರಂಗಭೂಮಿ ರಂಗ ಮಂದಿರಗಳ ಕೊರತೆ ಇದೆ. ಬೆಂಗಳೂರಿನಲ್ಲಿ ಕೇವಲ‌ ಮೂರು ಇವೆ. ನಾಟಕ ಕಲಿಯಲು‌ ಮಕ್ಕಳು ಹೋದರೆ ಹಾಳಾಗುತ್ತಾರೆಂಬ ಪೋಷಕರಲ್ಲಿನ ಭಾವನೆ ದೂರವಾಗಬೇಕು. ನಾಟಕ ಪ್ರಾಥಮಿಕ ಶಿಕ್ಷದಿಂದಲೇ ಕಲಿಸುವಂತ ಕೆಲಸ ಆಗಬೇಕು ಇದರಿಂದ ಅವರ ವಿವೇಚನಾ ಶಕ್ತಿ ಹೆಚ್ಚಲಿದೆ. ಈ ದಿಶೆಯಲ್ಲಿ ಸರ್ಕಾರ ಚಿಂತನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ  ಮಾತನಾಡಿ, 2008ರಿಂದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಪ್ರತಿ ವರ್ಷ ಕನ್ನಡ ಮತ್ತು ತೆಲುಗು ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿ 21 ಸಾವಿರ ನಗದು ಮತ್ತು ರಾಘವರ ಬೆಳ್ಳಿ ಪದಕ ನೆನಪಿನ ಕಾಣಿಕೆ ನೀಡಿ ಗೌರವಿಸುತ್ತಿದೆಮನದು ಹೇಳಿದರು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ  ರಾಜೇಂದ್ರ ಕಾರಂತರ ನಿರ್ದೇಶನದಲ್ಲಿ “ಮರಣ ಮೃದಂಗ” ನಾಟಕ ಪ್ರದರ್ಶನಗೊಂಡಿತು.‌
ಶನಿವಾರ ಆ.3ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಮಂಜುಳಾ ಚೆಲ್ಲೂರು ಹಾಗೂ ಆಂಧ್ರಪ್ರದೇಶದ ಖ್ಯಾತನಟ ವಾಡೇವು ಸುಂದರರಾವ್‌ ಭಾಗವಹಿಸುವರು. ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು