10:21 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ ಬಸ್ ಸಿಬ್ಬಂದಿಗಳಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

03/08/2024, 22:26

ಮಂಗಳೂರು(reporterkarnataka.com): ಬಸ್‌ನಲ್ಲಿ ಎದೆ ನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ನಗರದ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಅಭಿನಂದಿಸಲಾಯಿತು.
ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ ಅವನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಆರ್. ಧನರಾಜ್ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಬಸ್ ಸಿಬ್ಬಂದಿಗಳ ಮಾನವೀಯತೆಯ ಕಾಳಜಿ ಮೆಚ್ಚುವಂತದ್ದು, ಅವರೆಲ್ಲರೂ ಅಭಿನಂದನೆಗೆ ಅರ್ಹರು. ಇದರ ಜೊತೆಗೆ ತುಳು ಚಲನ ಚಿತ್ರರಂಗಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳಲ್ಲಿ ಅಧ್ಯಕ್ಷರು ತೊಡಗಿಸಿ ಕೊಳ್ಳಬೇಕಾಗಿದೆ ಎಂದರು. ನಿರ್ಮಾಪಕ ಕಿಶೋರ್ ಡಿ. ಶೆಟ್ಟಿ ಮಾತನಾಡಿ, ಇಂತಹ ಕಾರ್ಯಕ್ರಮ‌ ನಿರ್ಮಾಪಕರ ಸಂಘದಿಂದ ನಿರಂತರ ನಡೆಯಲಿ ಎಂದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೊಂಚಾಡಿ, ನಿರ್ಮಾಪಕರಾದ ಮಾಲಾಡಿ ಬಾಲಕೃಷ್ಣ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು