3:07 AM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಜೋಕಟ್ಟೆ: ಬಾಡಿಗೆ ಮನೆಯಲ್ಲಿ ಕೊರಳಿಗೆ ಬಟ್ಟೆ ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆ; ಕೊಲೆ ಶಂಕೆ

06/08/2024, 19:17

ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಕುತ್ತಿಗೆಗೆ ಬಟ್ಟೆ ಬಿಗಿದು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬೆಳಗಾವಿ ಮೂಲದ ಹನುಮಂತಪ್ಪ ಎಂಬವರ ಮನೆಗೆ 4 ದಿನಗಳ ಹಿಂದೆ ತನ್ನ ತಮ್ಮನ ಮಗಳಾದ 13ರ ಹರೆಯದ ಬಾಲಕಿಯು ಕೈ ನೋವಿನ ಚಿಕಿತ್ಸೆಗಾಗಿ ಆಗಮಿಸಿ ವಾಸ್ತವ್ಯ ಹೊಂದಿದ್ದಳು. ಇಂದು ಬೆಳಗ್ಗೆ ಹನುಮಂತನ ಮನೆಯವರೆಲ್ಲ ಕೆಲಸಕ್ಕೆ ಹೋದಾಗ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಫೋನ್ ಕೊಡಲು ತಿಳಿಸಿದ್ದರು. ಪಕ್ಕದ ಮನೆಯವರು ಫೋನ್ ಕೊಡಲು ಬಾಲಕಿ ಇದ್ದ ಬಾಡಿಗೆ ಮನೆಗೆ ಹೋದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿರುವ ಹಾಗೆ ಕಾಣಿಸುತ್ತಿದೆ ಎಂದು ಬಾಲಕಿಯ ತಾಯಿಗೆ ತಿಳಿಸಿದರು. ತಕ್ಷಣ ಮೃತ ಬಾಲಕಿಯ ತಾಯಿ ಹನುಮಂತ ಅವರಿಗೆ ಫೋನ್ ಮಾಡಿ ಬಾಡಿಗೆ ಮನೆಗೆ ಹೋಗುವಂತೆ ಹೇಳಿದರು. ಹನುಮಂತ ಅವರು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ದೂರು ನೀಡಿದರು. ಪಣಂಬೂರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್, ಡಿಸಿಪಿ ದಿನೇಶ್ ಕುಮಾರ್ ಮುಂತಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು