11:47 PM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

06/08/2024, 23:06

ಬೆಂಗಳೂರು(reporterkarnataka.com): ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು.
ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪನವರು, ಬಿಜೆಪಿ ಸರಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು ವಿವರಿಸಿದರು.
ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1 ಲಕ್ಷ 95 ಸಾವಿರ ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರಕಾರ ಮಾಡಿದೆ ಎಂದು ಟೀಕಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಇಂದ್ರೇಶ್ ಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮಾಜಿ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು. ರಾಜ್ಯದ ವಿವಿಧ ಭಾಗಗಳಿಂದ ಬಂದ ಕಾರ್ಯಕರ್ತರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು