3:13 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: 24 ತಾಸಿನೊಳಗೆ ಆರೋಪಿ ಬಂಧನ

07/08/2024, 21:23

ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 24 ತಾಸು ಕಳೆಯುವುದರೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಣಂಬೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಫಕ್ಕೀರಪ್ಪ ಹಣಮಪ್ಪ ಮಾದರ (51) ಎಂದು ಗುರುತಿಸಲಾಗಿದೆ. ಈತ ಕೂಡ ಬೆಳಗಾವಿ ಮೂಲದವನಾಗಿದ್ದಾನೆ. ಬೆಳಗಾವಿಯ ಪರಸಘಡ
ಹಂಚಿನಾಳದ 1085 ಮಾದರ ಓಣಿಯ ನಿವಾಸಿಯಾದ ಈತ ಕಳೆದ 6 ತಿಂಗಳಿನಿಂದ ಜೋಕಟ್ಟೆ ಪರಿಸರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ಬಾಲಕಿಯ
ಮೃತದೇಹ ಮಂಗಳವಾರ ಪತ್ತೆಯಾಗಿತ್ತು. ಕುತ್ತಿಗೆಗೆ ಬಟ್ಟೆ ಬಿಗಿದು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.
ಬೆಳಗಾವಿ ಮೂಲದ ಹನುಮಂತಪ್ಪ ಎಂಬವರ ಮನೆಗೆ 4 ದಿನಗಳ ಹಿಂದೆ ತನ್ನ ತಮ್ಮನ ಮಗಳಾದ 13ರ ಹರೆಯದ ಈ ಬಾಲಕಿಯು ಕೈ ನೋವಿನ ಚಿಕಿತ್ಸೆಗಾಗಿ ಆಗಮಿಸಿ ವಾಸ್ತವ್ಯ ಹೊಂದಿದ್ದಳು.
ಮಂಗಳವಾರ ಬೆಳಗ್ಗೆ ಹನುಮಂತನ ಮನೆಯವರೆಲ್ಲ ಕೆಲಸಕ್ಕೆ ಹೋದಾಗ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಫೋನ್ ಕೊಡಲು ತಿಳಿಸಿದ್ದರು. ಪಕ್ಕದ ಮನೆಯವರು ಫೋನ್ ಕೊಡಲು ಬಾಲಕಿ ಇದ್ದ ಬಾಡಿಗೆ ಮನೆಗೆ ಹೋದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿರುವ ಹಾಗೆ ಕಾಣಿಸುತ್ತಿದೆ ಎಂದು ಬಾಲಕಿಯ ತಾಯಿಗೆ ತಿಳಿಸಿದ್ದರು. ತಕ್ಷಣ ಮೃತ ಬಾಲಕಿಯ ತಾಯಿ ಹನುಮಂತ ಅವರಿಗೆ ಫೋನ್ ಮಾಡಿ ಬಾಡಿಗೆ ಮನೆಗೆ ಹೋಗುವಂತೆ ಹೇಳಿದ್ದರು. ಹನುಮಂತ ಅವರು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ
ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಂತೆ, ಡಿಸಿಪಿ ಸಿದ್ದಾರ್ಥ ಗೋಯಲ್, (ಕಾನೂನು ಮತ್ತು ಸುವ್ಯವಸ್ಥೆ), ಡಿಸಿಪಿ ಬಿ.ಪಿ. ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ ವಿಭಾಗ), ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರವೀಶ್ ನಾಯಕ್ (ಪ್ರಭಾರ) ಮತ್ತು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮನೋಜ್ ಕುಮಾರ್ ನಾಯ್ ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕಿ ಶ್ರೀಕಲಾ ಕೆ.ಟಿ ಹಾಗೂ ಎ.ಎಸ್.ಐ. ಕೃಷ್ಣ, ಬಿ.ಕೆ. ಎಚ್.ಸಿ.ಗಳಾದ ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಸಿಪಿಸಿ ಗಳಾದ ಶಶಿಕುಮಾರ್, ರಾಕೇಶ್ ರವರುಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು