5:40 PM Saturday21 - December 2024
ಬ್ರೇಕಿಂಗ್ ನ್ಯೂಸ್
ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ… ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್… ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಂದು ವರ್ಷ: ಪ್ರಧಾನಿ ಮೋದಿಯ ಭೇಟಿಯಾದ ವಿಜಯೇಂದ್ರ

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು