5:41 AM Monday13 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌: “ವಿಜ್ಞಾನ – ವಿಸ್ಮಯ ಮತ್ತು ಕುತೂಹಲ” – ವಿಮರ್ಶಾ ಕಾರ್ಯಗಾರ

09/08/2024, 13:08

ಮಂಗಳೂರು(reporterkarnataka.com): 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ. ಈ ಅಪರೂಪದ ಕಾರ್ಯಾಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಭಾಗವಹಿಸಲು ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 7618718791/ 9483942186

ಇತ್ತೀಚಿನ ಸುದ್ದಿ

ಜಾಹೀರಾತು