2:37 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶೋಷಿತರು ಅಧಿಕಾರ ನಡೆಸುವುದು ಮನುವಾದಿಗಳಿಗೆ ಸಹಿಸಲು ಆಗುತ್ತಿಲ್ಲ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

09/08/2024, 21:03

ಮೈಸೂರು(reporterkarnataka.com): ಶೋಷಿತ ವರ್ಗಕ್ಕೆ ಸೇರಿದ ತಾನು ಅಧಿಕಾರ ನಡೆಸುವುದು ಮನುವಾದಿ ಹಾಗೂ ಜಾತಿವಾದಿಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.


ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.
ರಾಜ್ಯದ ಜನರ ಆಶೀರ್ವಾದ ಬಲದಿಂದ ನಾನು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ.ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ, ಹಣ ಮಾಡುವ ಆಸೆ ಬಂದಿಲ್ಲ. ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಎರಡು ಬಾರಿ ಸಿಎಂ ಆದರೂ, ಪ್ರಮಾಣ ವಚನಕ್ಕೂ ನನ್ನ ಪತ್ನಿ ಬಂದಿಲ್ಲ.
ನಾವು ಭ್ರಷ್ಟಾಚಾರ ಮಾಡಲು, ನಿಮ್ಮ ನಂಬಿಕೆಗೆ ದ್ರೋಹವೆಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯೋದಿಲ್ಲ ಎಂದರು.
ಮಾಜಿ ಪ್ರಧಾನಿ, ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡವರಲ್ಲ. ಧರ್ಮ ಸಿಂಗ್ ಜೊತೆ ಸರ್ಕಾರ ರಚಿಸಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್‌ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಯಡಿಯೂರಪ್ಪ ಅವರು ಚೆಕ್‌ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು