6:46 AM Thursday1 - October 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ತಳೇವಾಡಿ ಗ್ರಾಮಸ್ಥರ ಸ್ಥಳಾಂತರ; ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ

11/08/2024, 11:30

ಸಂತೋಷ್ ಬೆಳಗಾವಿ
info.reportarkarnataka@gmail.com

ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು.
ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ‌ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು, ಸರಕಾರದ‌ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ‌ ಮಾಡಲಾಗುವುದು ಎಂದರು.
ಗ್ರಾಮಸ್ಥರ‌ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ‌ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ‌ ಖಾತೆ ತೆರಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು