9:13 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

11/08/2024, 21:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಅದು ಪರಿಸರ ಉಳಿವಿನ ಕೊಡುಗೆಯಾಗಿರುತ್ತದೆ ಮತ್ತು ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ಹೇಳಿದರು.
ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ವಿವಿಧ ಮಾದರಿಯ ಗಿಡಗಳನ್ನು ಹಾಗೂ ಹಣ್ಣಿನ ಗಿಡಗಳನ್ನು ವನಮಹೋತ್ಸವ ಕಾರ್ಯಕ್ರಮದಲ್ಲಿ ನೀಡಿ ಸಸಿಗಳನ್ನು ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮ ಪರಿಸರವನ್ನು ಉಳಿಸಿಕೊಳ್ಳಲು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಅದರ ಬಗ್ಗೆ ಕಾಳಜಿಯನ್ನು ಹೊಂದಿರಬೇಕು ಮುಂದಿನ ಪೀಳಿಗೆಗೆ ಮತ್ತು ನಮ್ಮ ರಕ್ಷಣೆಗೆ ಪರಿಸರ ಅಗತ್ಯ ಎಂದು ತಿಳಿಸಿದರು.
ನಂತರ ವಲಯ ತರಬೇತಿದಾರರಾದ ಕೆ. ಪಿ. ಎಸ್. ಸ್ವಾಮಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪರಿಸರವು ಹೇಗೆ ಕುಲಷಿತವಾಗುತ್ತಿದೆ ಎಂದು ನಾವು ತಿಳಿಯಲ್ಪಟ್ಟಿದ್ದೇವೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರದ ಅವಘಡಗಳು ಸಂಭವಿಸದಂತೆ ಮಣ್ಣಿನ ರಕ್ಷಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.


ನಂತರ ಪೂರ್ವಾಧ್ಯಕ್ಷರಾದ ನಾಗರಾಜ್ ಮಾತನಾಡಿ, ಶಾಲಾ ಮಕ್ಕಳು ಒಂದು ಗಿಡದ ಜವಾಬ್ದಾರಿಯನ್ನು ತೆಗೆದುಕೊಂಡು ಸಂರಕ್ಷಿಸಿದರೆ ಅವರಿಗೆ ಮುಂದಿನ ಆರು ತಿಂಗಳಲ್ಲಿ ಬಹುಮಾನವನ್ನು ನೀಡುತ್ತೇವೆ ಎಂದು ಮಕ್ಕಳಿಗೆ ಉತ್ತೇಜನ ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಕುಮಾರ್, ಅಂಬಳಿಕೆ ಗಿರೀಶ್, ರೊ ಮನೋಜ್ ಕುಮಾರ್ , ಪಿ. ವಿ. ಭರತ್ ಕುಮಾರ್, ವಾಣಿ ಗಣೇಶ್ ನಿಕಟ ಪೂರ್ವಾಧ್ಯಕ್ಷರು , ಇನ್ನರ್ವಿಲ್ ಕ್ಲಬ್ ತೀರ್ಥಹಳ್ಳಿ ನಯನ ಜಯಪ್ರಕಾಶ್ ಶೆಟ್ಟಿ, ಜ್ಯೋತಿ , .ಲಪ್ರತಿಮಾ, ವಿಶ್ವನಾಥ ಶೆಟ್ಟಿ ಸೇರಿದಂತೆ ಶಿಕ್ಷಕರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು